Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಾಜ್ಯ ಸರಕಾರ ಚಿಲ್ಲರೆ ಮದ್ಯ...

ಕಲಬುರಗಿ | ರಾಜ್ಯ ಸರಕಾರ ಚಿಲ್ಲರೆ ಮದ್ಯ ಮಾರಾಟದ ಮೇಲೆ ಶೇ.20ರಷ್ಟು ಕಮಿಷನ್ ನೀಡಬೇಕು : ಅಶೋಕ್ ಗುತ್ತೇದಾರ್

ವಾರ್ತಾಭಾರತಿವಾರ್ತಾಭಾರತಿ4 April 2025 7:26 PM IST
share
Photo of Letter of appeal

ಕಲಬುರಗಿ: ರಾಜ್ಯ ಸರಕಾರವು ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20ರಷ್ಟು ಕಮಿಷನ್ ನೀಡಬೇಕು. ಹೆಚ್ಚುವರಿ ಅಬಕಾರಿ ಶುಲ್ಕವನ್ನು ಕಡಿಮೆ ಮಾಡುವುದಲ್ಲದೆ ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಕೂಡಲೇ ಪರಿಗಣಿಸಿ ಈಡೇರಿಸಬೇಕೆಂದು ಫೆಡರೇಶನ್ ಆಫ್ ಮರ್ಚೆಂಟ್ಸ್ ನ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಅಶೋಕ್ ಗುತ್ತೇದಾರ್ ಹೇಳಿದರು.

ಫೆಡರೇಶನ್ ಆಫ್ ಮರ್ಚೆಂಟ್ಸ್ ಕರ್ನಾಟಕ ಬೆಂಗಳೂರು ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಯುವ ಸಾಂಕೇತಿಕ ಪ್ರತಿಭಟನೆಯ ಅಂಗವಾಗಿ ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ರಾಜ್ಯ ಸರಕಾರಕ್ಕೆ ಸಲ್ಲಿಸುವ ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ವಿಭಾಗದ ಸಹಾಯಕ ನಿರ್ದೇಶಕರಾದ ಶಿವಶರಣಪ್ಪ ಅವರಿಗೆ ಮನವಿ ಸಲ್ಲಿಸಿದ ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

ಕಳೆದ ಹಲವಾರು ವರ್ಷಗಳಿಂದ ಮದ್ಯ ಮಾರಾಟಗಾರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ರಾಜ್ಯ ಸರಕಾರಕ್ಕೆ ಸುಮಾರು 40 ಸಾವಿರ ಕೋಟಿ ರೂ. ಆದಾಯವನ್ನು ತಂದು ಕೊಡುವ ಈ ಉದ್ಯಮದ ಬಗ್ಗೆ ರಾಜ್ಯ ಸರ್ಕಾರದಿಂದ ಸೂಕ್ತವಾದ ಸ್ಪಂದನೆ ದೊರೆಯದಿರುವುದರಿಂದ ರಾಜ್ಯಾದ್ಯಂತ ಮಧ್ಯ ಮಾರಾಟಗಾರರು ಒಂದು ದಿನದ ಸಾಂಕೇತಿಕ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಮದ್ಯ ಮಾರಾಟಗಾರರಿಗೆ ಶೇ.20ರಷ್ಟು ಇದ್ದ ಕಮಿಷನನ್ನು ಕುಗ್ಗಿಸಿ ಈಗ ಶೇ.10 ಕ್ಕೆ ಇಳಿಸಲಾಗಿದೆ. ಪ್ರಸಕ್ತ ದಿನಮಾನದಲ್ಲಿ ಗ್ರಾಹಕರ ಬೇಡಿಕೆ ಹಾಗೂ ಸುವ್ಯವಸ್ಥೆ ಕಲ್ಪಿಸಲು ಖರ್ಚು ವೆಚ್ಚಗಳು ಜಾಸ್ತಿ ಆಗುತ್ತಿರುವುದರಿಂದ ಕಮಿಷನ್ ಹೆಚ್ಚಿಸಿ ಮತ್ತೆ ಮಾರಾಟಗಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸಿ ಎಲ್ 2 ರಲ್ಲಿ ಮದ್ಯ ಸೇವಿಸಲು ಅನುಮತಿಯನ್ನು ನೀಡಬೇಕು. ಸಿ ಎಲ್ 9ರಲ್ಲಿ ಮಧ್ಯವನ್ನು ಪಾರ್ಸೆಲ್ ರೂಪದಲ್ಲಿ ಮಾರಾಟ ಮಾಡುವ ಕುರಿತು ಕಾನೂನು ತಿದ್ದುಪಡಿ ಮಾಡಬೇಕು. ಸಿಎಲ್7 ಅಥವಾ ಇನ್ನಿತರ ದೊಡ್ಡ ಹೋಟೆಲ್ ಗಳಿಗೆ ಹೋಗಿ ಮದ್ಯದೊಂದಿಗೆ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ದುಬಾರಿ ಖರ್ಚು ಮಾಡಲು ಸಾಧ್ಯವಿಲ್ಲದ ಬಡವರ್ಗದ ಗ್ರಾಹಕರಿಗೆ ಅನುಕೂಲವಾಗಲು ಸಣ್ಣ ಶರತ್ತನ್ನು ಸಡಿಲಿವುದು ಅತ್ಯಂತ ಅಗತ್ಯವಾಗಿದೆ. ಸನ್ನದು ಆವರಣದಲ್ಲಿ ನಿಗದಿ ಪಡಿಸಿದ ನಿರ್ದಿಷ್ಟ ಸ್ಥಳ ಮತ್ತು ಮೊದಲೇ ತಯಾರಿಸಿದ ಆಹಾರಗಳನ್ನು ನೀಡಲು ಅವಕಾಶ ಮಾಡಿಕೊಡುವುದರಿಂದ ಬಡವರ್ಗದ ಗ್ರಾಹಕರಿಗೆ ಸಹಾಯವಾಗುತ್ತದೆ ಮತ್ತು ಸಾರ್ವಜನಿಕ ಪ್ರದೇಶದಲ್ಲಿ ಮಾಧ್ಯಮ ಮಾಡುವುದನ್ನು ತಡೆಗಟ್ಟಲು ಅನುಕೂಲವಾಗುತ್ತದೆ. ಇದರಿಂದ ಅಬಕಾರಿ ಕಾಯಿದೆ ಉಲ್ಲಂಘನೆಯನ್ನು ಕೂಡ ತಡೆಯಲು ಸಾಧ್ಯ ಎಂದರು.

ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷರಾದ ವೀರಯ್ಯ ಕೆ ಗುತ್ತೇದಾರ್, ಉಪಾಧ್ಯಕ್ಷರಾದ ರಾಮುಲು ಬಿ ರೆಡ್ಡಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕಡೆಚೂರ್ , ಕೋಶಾಧಿಕಾರಿ ತಿಮ್ಮಪ್ಪ ಎ.ಇ ಸನ್ನದು ದಾರರಾದ ಮಹಾದೇವ ಗುತ್ತೇದಾರ್, ಅಶೋಕ್ ಶಹಪುರಕರ್, ಜಗದೇವ ಗುತ್ತೇದಾರ್, ದಯಾನಂದ ಪೂಜಾರಿ, ಶಿವು ಗುತ್ತೇದಾರ್, ಶಾಂತಕುಮಾರ್ ಪಾಟೀಲ್ ಗಂಗಾಧರ್ ಪ್ರೀತಮ್ ರೆಡ್ಡಿ, ಅಂಬಯ್ಯ ಗುತ್ತೇದಾರ್ ಇಬ್ರಾಹಿಂಪುರ್, ಮಲ್ಲಿಕಾರ್ಜುನ ಸ್ವಾಮಿ ಭಂಕೂರ್,ಆಕಾಶ್ ಗುತ್ತೇದಾರ್, ಸುರೇಶ್ ಗುತ್ತೇದಾರ ಮಟ್ಟೂರು, ಮಹಾ ಕೀರ್ತಿ ಶೆಟ್ಟಿ,ಹರ್ಷ,ಸೋನು ಪಟೇಲ್, ಮಂಜುನಾಥ ಗುತ್ತೇದಾರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X