ಕಲಬುರಗಿ | ಜು.18ರಂದು ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಹೊನ್ನಮ್ಮ ಹಾಗರಗಿ

ಕಲಬುರಗಿ: ಚಿತ್ರದುರ್ಗದ ಶ್ರೀ ಜಗದ್ಗುರು ಸಿದ್ದಾರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಿಂದ ಭೋವಿ ವಡ್ಡರ ಸಮಾಜದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಜು.18ರಂದು ಗುರುಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಸದಸ್ಯೆ ಹೊನ್ನಮ್ಮ ಹಾಗರಗಿ ತಿಳಿಸಿದ್ದಾರೆ.
ಭೋವಿ ವಡ್ಡರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಭೋವಿ ವಡ್ಡರ ಸಮಾಜದ ವಿದ್ಯಾರ್ಥಿಗಳಿ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು.
ಆಸಕ್ತರು ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಭಾವಚಿತ್ರ, ಬ್ಯಾಂಕ್ ಪಾಸ್‍ಬುಕ್ ಪ್ರತಿಯನ್ನು ಜೂ.31ರ ಒಳಗಾಗಿ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೂವಿ ಗುರುಪೀಠ ಚಿತ್ರದುರ್ಗ, ಇಮ್ಮಡಿಗಿರಿ ನಗರ ದಾವಣಗೆರೆ ರಸ್ತೆ ರಾಷ್ಟ್ರೀಯ ಹೆದ್ದಾರಿ-4 ಚಿತ್ರದುರ್ಗ-577502ಕ್ಕೆ ಪೋಸ್ಟ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೋ. ನಂ. 9481308433, 9900882964, 888099942 ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.





