Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್‌ಐಆರ್‌ ಸ್ಥಗಿತಕ್ಕೆ...

Kalaburagi | ಎಸ್‌ಐಆರ್‌ ಸ್ಥಗಿತಕ್ಕೆ ಆಗ್ರಹಿಸಿ ಅ.16ರಂದು ರಾಜ್ಯಾದ್ಯಂತ ಧರಣಿ: ಡಿ.ಜಿ.ಸಾಗರ

ವಾರ್ತಾಭಾರತಿವಾರ್ತಾಭಾರತಿ14 Oct 2026 4:56 PM IST
share
Kalaburagi | ಎಸ್‌ಐಆರ್‌ ಸ್ಥಗಿತಕ್ಕೆ ಆಗ್ರಹಿಸಿ ಅ.16ರಂದು ರಾಜ್ಯಾದ್ಯಂತ ಧರಣಿ: ಡಿ.ಜಿ.ಸಾಗರ

ಕಲಬುರಗಿ: ಮತದಾರರ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ, ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ಅ. 16ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ. ಸಾಗರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಗುರುತಿನ ಚೀಟಿ ನೀಡುವ ಮತ್ತು ರದ್ದುಪಡಿಸುವ ಪ್ರಕ್ರಿಯೆಯು ಕಾನೂನಿನ ನಿಯಮಾವಳಿಗಳ ಪ್ರಕಾರವೇ ನಡೆಯಬೇಕು. ಆದರೆ, ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯ ಕುರಿತು ಹಲವು ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಈ ಪ್ರಕ್ರಿಯೆಯಿಂದ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಗಳ ಬಗ್ಗೆ ಕಳವಳವಿದೆ ಎಂದು ಹೇಳಿದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿನ ಲೋಪದೋಷಗಳು ಹಾಗೂ ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ. ಚುನಾವಣಾ ಆಯೋಗವು ಈ ಆರೋಪಗಳನ್ನು ನಿರಾಕರಿಸಿದ್ದರೂ, ಮತದಾರರಲ್ಲಿರುವ ಆತಂಕ ಮತ್ತು ಗೊಂದಲಗಳನ್ನು ನಿವಾರಿಸುವಲ್ಲಿ ಯಶಸ್ವಿಯಾಗಿಲ್ಲ. ಇದರಿಂದ ಜನಸಾಮಾನ್ಯರು ತಮ್ಮ ಮತದಾನದ ಹಕ್ಕು ಉಳಿಯುತ್ತದೆಯೇ ಎಂಬ ಆತಂಕದಲ್ಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಎಸ್‌ಐಆರ್‌ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದು, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಧರಣಿಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸುರೇಶ ಹಾದಿಮನಿ, ಉಮೇಶ ನರೋಣಾ, ಎಸ್.ಪಿ. ಸುಳ್ಳದ, ಕೃಷ್ಣಪ್ಪ ಕರಣಿಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

SIRProtestsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X