Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಾರದಲ್ಲಿ 5 ದಿನಗಳ ಕೆಲಸ...

ಕಲಬುರಗಿ | ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ27 Jan 2026 8:21 PM IST
share
ಕಲಬುರಗಿ | ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಮುಷ್ಕರ

ಕಲಬುರಗಿ : 12ನೇ ದ್ವಿಪಕ್ಷೀಯ ವೇತನ ಒಪ್ಪಂದದಂತೆ ಬ್ಯಾಂಕುಗಳಲ್ಲಿ ವಾರಕ್ಕೆ ಐದು ದಿನದ ಕೆಲಸ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಗ್ರಾಮೀಣ ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆಯ ವತಿಯಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿ, ಕುಸನೂರ ರಸ್ತೆ ಆವರಣದಲ್ಲಿ ಮಂಗಳವಾರ ಮುಷ್ಕರ ನಡೆಸಲಾಯಿತು.

ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷ ಶಿವಕುಮಾರ್ ಬಗಲೂರ, 2024ರ ಮಾರ್ಚ್ 8ರಂದು ಐಬಿಎ (IBA) ಹಾಗೂ ಯುಎಫ್‌ಬಿಯು (UFBU) ನಡುವೆ 12ನೇ ದ್ವಿಪಕ್ಷೀಯ ವೇತನ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಅದರಂತೆ ವಾರಕ್ಕೆ ಐದು ದಿನದ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಒಂದೂವರೆ ವರ್ಷ ಕಳೆದರೂ ಕೇಂದ್ರ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ಆರ್‌ಬಿಐ, ನಾಬಾರ್ಡ್, ಎಲ್‌ಐಸಿ, ಜಿಐಸಿ, ಸೆಬಿ ಹಾಗೂ ಷೇರುಪೇಟೆಗಳಲ್ಲಿ ವಾರಕ್ಕೆ ಐದು ದಿನದ ಕೆಲಸ ವ್ಯವಸ್ಥೆ ಜಾರಿಯಲ್ಲಿದೆ. ಆದರೆ ಬ್ಯಾಂಕ್ ನೌಕರರಿಗೆ ಮಾತ್ರ ಮಲತಾಯಿ ಧೋರಣೆ ತೋರಲಾಗುತ್ತಿದೆ, ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಆದಷ್ಟು ಬೇಗ ಬ್ಯಾಂಕಿಂಗ್ ವಲಯಕ್ಕೂ ವಾರಕ್ಕೆ ಐದು ದಿನದ ಕೆಲಸ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್‌ಸಿ–ಎಸ್‌ಟಿ ವೆಲ್ಫೇರ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಾಹುಲ್ ಹರವಾಳ, ಖಜಾಂಚಿ ಕಿರಣ ಭಾವಿಮನಿ, ರಾಕೇಶ್, ಭೀಮಪ್ಪ, ಅಧಿಕಾರಿಗಳ ಸಂಘದ ಕಾರ್ಯಾಧ್ಯಕ್ಷ ಸಿದ್ದಣ್ಣ, ದತ್ತಾತ್ರೇಯ ಕುಲಕರ್ಣಿ, ಪ್ರಸನ್ನ ಕುಲಕರ್ಣಿ, ಶಿವಾನಂದ, ಅಭಿಷೇಕ, ಅರುಣಕುಮಾರ್, ಕಿರಣ ರೆಶ್ಮಿ, ಜ್ಯೋತಿ ವಾಲಿಶೆಟ್ಟಿ, ಹೇಮಾ ಸಕ್ರಿ, ಅಧಿಕಾರಿಗಳ ಜಿಲ್ಲಾ ಅಧ್ಯಕ್ಷ ಸಚಿನ್ ತೆಗ್ಗಿನ, ಕಾರ್ಯದರ್ಶಿ ಶ್ರೀನಿವಾಸ್, ನೌಕರರ ಸಂಘದ ಕಾರ್ಯಾಧ್ಯಕ್ಷ ವಿಶ್ವನಾಥ್ ರೆಡ್ಡಿ, ಜಿಲ್ಲಾಧ್ಯಕ್ಷ ಆನಂದ, ಹನುಮಾನ್ ಸಿಂಗ್, ಶಿವಲಿಂಗ ಸೇರಿದಂತೆ ಅನೇಕ ನೌಕರರು ಭಾಗವಹಿಸಿದ್ದರು.

ಇದಲ್ಲದೆ ನಿವೃತ್ತ ನೌಕರರಾದ ಎಸ್.ಎಸ್. ಕುಲಕರ್ಣಿ, ರಾಜೇಂದ್ರ ಮದಕುಂಟಿ, ರಾಜಶೇಖರ ಬಬಲಾದಕರ್ ಸೇರಿದಂತೆ ನೂರಾರು ಸಿಬ್ಬಂದಿಗಳು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X