ಕಲಬುರಗಿ | ವಿದ್ಯಾರ್ಥಿನಿಯರು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವ ಕನಸು ಕಾಣಬೇಕು : ಬಸವರಾಜ ದೇಶಮುಖ

ಕಲಬುರಗಿ : ವಿದ್ಯಾರ್ಥಿನಿಯರು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವ ಕನಸು ಕಾಣಬೇಕೆಂದು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.
ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಸೋಮವಾರ ವಾರ್ಷಿಕೋತ್ಸವ ಕಾರ್ಯಕ್ರಮ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಲಿಂ.ದೊಡ್ಡಪ್ಪ ಅಪ್ಪ ಅವರು ಮೊದಲಿಗೆ ಹೆಣ್ಣು ಮಕ್ಕಳಿಗಾಗಿ ಶಾಲೆ ಆರಂಭಿಸಿದರು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂದು ಮನಗಂಡು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಮುನ್ನಡಿ ಹಾಡಿದರು. ಮುಂದೆ ಡಾ.ಶರಣಬಸವಪ್ಪ ಅಪ್ಪಾ ಅವರು ಹೆಣ್ಣು ಮಕ್ಕಳಿಗೆ ಅನೇಕ ಶಾಲಾ-ಕಾಲೇಜುಗಳು ತೆರೆದು ಅವರ ಭವಿಷ್ಯ ರೂಪಿಸಿಕೊಳ್ಳಲು ದಾರಿ ಮಾಡಿಕೊಟ್ಟರು. ಈ ಸಂಸ್ಥೆಯಲ್ಲಿ ಕಲಿತ ಸಾವಿರಾರು ಮಹಿಳೆಯರು ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸಮಯ ವ್ಯರ್ಥ ಮಾಡದೆ ಓದಿನ ಕಡೆಗೆ ಹೆಚ್ಚು ಹೆಚ್ಚು ಸಮಯ ಕಳೆಯಬೇಕು. ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳನ್ನು ಓದಿ ತಿಳಿದುಕೊಳ್ಳಬೇಕು. ಯಾವ ವಿಷಯದಲ್ಲಿ ಹೆಚ್ಚು ಪರಿಣತಿ ಇರುವುದನ್ನು ನೋಡಿಕೊಂಡು ಆ ವಿಷಯದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ರೇಷ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಭಾರತಿ ಎನ್.ರೇಷ್ಮಿ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ, ಕೌಶಲ್ಯ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದರು.
ಶರಣಬಸವೇಶ್ವರ ದೇವಸ್ಥಾನ ಆವರಣದ ನಿರ್ದೇಶಕರಾದ ಡಾ.ನೀಲಾಂಬಿಕಾ ಶೇರಿಕಾರ, ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ ಸ್ವಾಗತ ಮತ್ತು ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಸೀಮಾ ಪಾಟೀಲ ವಾರ್ಷಿಕ ವರದಿ ವಾಚನ ಮಾಡಿದರು. ಮುಕ್ತಾಂಬಿಕಾ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಂ.ಆರ್.ಹುಗ್ಗಿ, ವಿದ್ಯಾರ್ಥಿನಿಯರು ಇದ್ದರು.
ಕೃಪಾಸಾಗರ ಗೊಬ್ಬುರ್, ಡಾ.ಶಾಂತಲಿoಗ ಘಂಟೆ ಮತ್ತು ಪ್ರೀತಿ ಬಿರಾದಾರ ಅತಿಥಿ ಪರಿಚಯ ಮಾಡಿದರು, ಕಲಾವಾಣಿ ವಿದ್ಯಾರ್ಥಿ ಸಂಘದ ಸಲಹೆಗಾರಾದ ಡಾ.ಕಾಮೇಶ ದಾಮಾ ವಂದಿಸಿದರು. ಅಂಬಿಕಾ ಮೈನಾಳ, ಜವೇರಿಯ ಅಂಜುಮ್ ನಿರೂಪಿಸಿದರು. ಸಂಗೀತ ವಿಭಾಗದ ಪ್ರಾಧ್ಯಾಪಕರು ಮತು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮಹಾವಿದ್ಯಾಲಯದ ಶಿಕ್ಷಕ ಮತ್ತು ಶಿಕ್ಷಕೇತರರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯಕ್ಕೆ ಈ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅಂತಿಮ ವರ್ಷದ ಪದವಿ ಕಲಾ ವಿಭಾಗದಲ್ಲಿ 2ನೇ ರ‍್ಯಾಂಕ್ ಪಡೆದ ಮಹಾವಿದ್ಯಾಲಯ ವಿದ್ಯಾರ್ಥಿನಿ ವಿದ್ಯಾಶ್ರೀ, ಈ ವರ್ಷ ವಿವಿಧ ಕ್ಷೇತ್ರಗಳಲ್ಲಿ ಪ್ರಶಸ್ತಿ ಪಡೆದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ , ಪ್ರಾಧ್ಯಾಪಕರಾದ ಡಾ.ಸಿದ್ಧಲಿಂಗರೆಡ್ಡಿ ಮತ್ತು ಡಾ.ಶಾಂತಲಿoಗ ಘಂಟೆ, ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.







