Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿದ್ಯಾರ್ಥಿನಿ ಆತ್ಮಹತ್ಯೆ...

ಕಲಬುರಗಿ | ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಉನ್ನತ ತನಿಖೆಗೆ ವಿವಿಧ ಸಂಘಟನೆಗಳಿಂದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Aug 2025 6:52 PM IST
share
ಕಲಬುರಗಿ | ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಉನ್ನತ ತನಿಖೆಗೆ ವಿವಿಧ ಸಂಘಟನೆಗಳಿಂದ ಆಗ್ರಹ

ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿ ಸಮೀಪದಲ್ಲಿರುವ ಕೇಂದ್ರೀಯ ವಿವಿಯಲ್ಲಿ ಭೂಗರ್ಭಶಾಸ್ತ್ರ ಪದವಿ ಓದುತ್ತಿದ್ದ ಜಯಶ್ರೀ ನಾಯಕ್ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ವಿವಿಯ ಮುಂಭಾಗ ಪ್ರತಿಭಟಿಸಿ, ಕುಲಸಚಿವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಜನವಾದಿ ಮಹಿಳಾ ಸಂಘಟನೆ, ಎಸ್ಎಫ್ಐ, ಡಿವೈಎಫ್ಐ, ದಲಿತ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಉಪಕುಲಪತಿಗಳೇ ಖುದ್ದಾಗಿ ಬಂದು ನಮ್ಮ ಮನವಿ ಸ್ವೀಕರಿಸಬೇಕು ಎಂದು ಹೇಳಿದಾಗ ಹೋರಾಟಗಾರರ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ಮಧ್ಯೆ ವಿವಿಯ ಕೆಲ ವಿದ್ಯಾರ್ಥಿಗಳು ಪ್ರತಿಭಟನೆಗೆ ಅಡ್ಡಿಪಡಿಸುವಂತಹ ಘಟನೆ ನಡೆದಾಗ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ವಾತಾವರಣವನ್ನು ತಿಳಿಗೊಳಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುವ ಶಿಕ್ಷಕರೇ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. ಜಯಶ್ರೀಯು ಅವಳ ಅಳಲನ್ನು ಬಸವರಾಜ ಕೂಬಕಡ್ಡಿ ಅವರ ಎದುರು ತೊಡಿಕೊಂಡಿದ್ದಾಳೆ, ಆದರೆ ಅವಳ ಸಮಸ್ಯೆಯನ್ನು ಸರಿಯಾಗಿ ಕೇಳದೆ ಇರುವುದು ಮತ್ತು ಅವಳ ಸಾವು ಇಡೀ ಶಿಕ್ಷಕ ವೃಂದಕ್ಕೆ ಅವಮಾನಕರವಾಗಿದೆ ಎಂದು ಹೇಳಿದರು.

ಕೇಂದ್ರೀಯ ವಿವಿಯು ಆರೆಸ್ಸೆಸ್ ಅಡ್ಡೆಯಾಗಿಬಿಟ್ಟಿದೆ. ವಿವಿ ಆವರಣದಲ್ಲಿ ಹೋಮ ಹವನ, ಮತ್ತಿತರ ಚಟುವಟಿಕೆಗಳು ನಡೆಯುತ್ತಿವೆ, ಆತ್ಮಹತ್ಯೆ ಪ್ರಕರಣ ದಿಕ್ಕುತಪ್ಪಿಸಲು ಉದ್ದೇಶಪೂರ್ವಕವಾಗಿ ಕೆಲ ಮಾಧ್ಯಮಗಳು ವಿವಿ ಆವರಣದಲ್ಲಿ ರಾತ್ರೋ ರಾತ್ರಿ ಮಝಾರ್ ಪ್ರತ್ಯಕ್ಷ ಆಗಿವೆ ಎಂದು ಸುಳ್ಳು ಸುದ್ದಿ ಹಬ್ಬಿಸಿವೆ. ಗೇಟಿನ ಹೊರಗಡೆ ಮನವಿ ಪತ್ರ ಕೊಡುತ್ತೇವೆ ಎಂದರೂ ಒಳಗಡೆ ಬಿಡಲ್ಲ, ಮಾಧ್ಯಮಗಳು ವಿವಿ ಆವರಣ ಪ್ರವೇಶಿಸಿ ಸುಳ್ಳು ಸುದ್ದಿ ಹೇಗೆ ಪ್ರಸಾರ ಮಾಡಿದವು ಎಂದು ವಿವಿಯ ಆಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯಾ ಉಪಾಧ್ಯಕ್ಷೆ ಕೆ.ನೀಲಾ ಮಾತನಾಡಿ, ವಿದ್ಯಾರ್ಥಿನಿಯ ಸಾವಿನ ಪ್ರಕರಣವು ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು, ಪ್ರಕರಣದಲ್ಲಿ ಕುಲಪತಿ, ಕುಲಸಚಿವ ಹಾಗೂ ವಿದ್ಯಾರ್ಥಿ ಕಲ್ಯಾಣಾಧಿಕಾರಿಗೂ ಸಹ ವಿಚಾರಣೆ ನಡೆಸಬೇಕು, ಇಂತಹ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗುತ್ತಿರುವ ವಿವಿ ಕುಲಪತಿ ಕೂಡಲೇ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಡಿವೈಎಫ್ಐ ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ್, ಸುಜಾತಾ ವೈ, ಪಾಂಡುರಂಗ ಮಾವಿನಕರ ಸೇರಿದಂತೆ ಮತ್ತಿತರರು ಮಾತನಾಡಿದರು.

ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಗುಡ್ಡೆ, ಪದ್ಮಿನಿ ಕಿರಣಗಿ, ಲವಿತ್ರ ವಸ್ತ್ರದ್, ಸಲ್ಮಾನ್ ಖಾನ್ ದೆವಂತಗಿ, ಡಾ.ಪ್ರಭು ಖಾನಾಪುರೆ, ಪ್ರಮೋದ ಪಾಂಚಾಳ, ವಿಜಯಲಕ್ಷ್ಮಿ ಗಡ್ಡೆ, ಚಂದಮ್ಮ ಗೋಳಾ, ಭೀಮಾಶಂಕರ ಮಾಡಿಯಾಳ, ಮೌಲಾ ಮುಲ್ಲಾ, ಮಹೇಶ್ ಕುಮಾರ್ ರಾಥೋಡ್, ಸರ್ವೇಶ್ ಮಾವಿನಕರ, ಶಾಂತಾ ಸರಡಗಿ, ಸಾಜಿದ್, ಮಲ್ಲಿಕಾರ್ಜುನ್ ಶೃಂಗೇರಿ ಸೇರಿದಂತೆ ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X