Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ನಾವೀನ್ಯ ಬೋಧನಾ ತಂತ್ರಗಳಿಂದ...

ಕಲಬುರಗಿ | ನಾವೀನ್ಯ ಬೋಧನಾ ತಂತ್ರಗಳಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು: ಪ್ರೊ. ಶುಭಾಂಗಿ

ವಾರ್ತಾಭಾರತಿವಾರ್ತಾಭಾರತಿ9 March 2026 9:04 PM IST
share
ಕಲಬುರಗಿ | ನಾವೀನ್ಯ ಬೋಧನಾ ತಂತ್ರಗಳಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು: ಪ್ರೊ. ಶುಭಾಂಗಿ

ಕಲಬುರಗಿ: ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜುಗಳ ಅಧ್ಯಾಪಕರು ನಾವೀನ್ಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ವಿಷಯದ ಅರಿವು, ಆಸಕ್ತಿ, ಸಕ್ರಿಯ ಕಲಿಕೆ ಹಾಗೂ ತಂತ್ರಜ್ಞಾನ ಬಳಕೆಗೆ ಪ್ರೋತ್ಸಾಹ ನೀಡಬೇಕು ಎಂದು ಕಲಬುರಗಿ ವಿಟಿಯು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಪ್ರೊ. ಶುಭಾಂಗಿ ಡಿ.ಸಿ. ಸಲಹೆ ನೀಡಿದರು.

ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರೂಸಾ/ಪಿಎಂ-ಉಷಾ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ, ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ರಿಲಯನ್ಸ್ ಫೌಂಡೇಶನ್ ಸ್ಕಿಲ್ಲಿಂಗ್ ಅಕಾಡೆಮಿ ಮತ್ತು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ “ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ್ಯ ಬೋಧನಾ ತಂತ್ರಗಳು ಮತ್ತು ಪಠ್ಯಕ್ರಮ ಚೌಕಟ್ಟು” ಕುರಿತ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ (ಎಫ್‌ಡಿಪಿ) ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಬದಲಾಗುತ್ತಿರುವ ಶೈಕ್ಷಣಿಕ ಕ್ಷೇತ್ರಕ್ಕೆ ಅನುಗುಣವಾಗಿ ಶಿಕ್ಷಣದ ಬೆಳವಣಿಗೆ, ಪಠ್ಯಕ್ರಮ ಚೌಕಟ್ಟು, ಬೋಧನಾ ವಿಧಾನ ಹಾಗೂ ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು. ವಿಷಯದ ಗ್ರಹಿಕೆಗೆ ಜೊತೆಗೆ ಎಐ ಹಾಗೂ ರೋಬೋಟ್ ತಂತ್ರಜ್ಞಾನಗಳ ಅರಿವು ಮೂಡಿಸಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಬೇಕು ಎಂದು ಹೇಳಿದರು.

ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ನ ತರಬೇತಿ ಅಧಿಕಾರಿ ಜೋಶುವಾ ಡೇನಿಯಲ್ ಮಾತನಾಡಿ, ವೃತ್ತಿಪರ ಸಂಸ್ಥೆಗಳ ಅಗತ್ಯ ಕೌಶಲ್ಯ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಕಲಿಕೆ ವಿಧಾನಗಳ ನಡುವಿನ ಅಂತರ ಕಡಿಮೆಗೊಳಿಸಲು ಶಿಕ್ಷಣದ ಜೊತೆಗೆ ವೃತ್ತಿ ಕೌಶಲ್ಯ, ವೃತ್ತಿ ಜ್ಞಾನ ಹಾಗೂ ಅನುಭವವನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂದರು. ಉದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿಗಳು ಸಜ್ಜಾಗಲು ಅಧ್ಯಾಪಕರು ಹೊಸ ಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಜೆಕಾರ್ತಿಕೇಯ ತರಬೇತಿ ಸಲಹಾ ಸಂಸ್ಥೆಯ ಸಿಇಓ ಡಾ. ಅಭಯ್ ಸರ್ದೇಶ್‌ಪಾಂಡೆ ಮಾತನಾಡಿ, ಇಂದಿನ ಗುಣಮಟ್ಟದ ಶಿಕ್ಷಣದೊಂದಿಗೆ ಮಾನವನ ನಡವಳಿಕೆಯಲ್ಲಿ ಬದಲಾವಣೆ ಅಗತ್ಯ. ಈ ತರಬೇತಿಯಿಂದ ಶಿಕ್ಷಕರು ಪ್ರಾಯೋಗಿಕ ಹಾಗೂ ಸಂವಾದಾತ್ಮಕ ಬೋಧನೆಗೆ ಒತ್ತು ನೀಡುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉಡಿಕೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಬೋಧನೆ ಶಿಕ್ಷಕರ ವೃತ್ತಿ ಜೀವನದ ಅವಿಭಾಜ್ಯ ಅಂಗವಾಗಿದೆ. ವಿಶ್ವವಿದ್ಯಾಲಯ ಮತ್ತು ಕಾಲೇಜುಗಳು ಮಾನ್ಯತೆ ಹಾಗೂ ಉನ್ನತ ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧಿಸಲು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮಗಳು ಮಹತ್ವದ್ದಾಗಿವೆ ಎಂದು ಹೇಳಿದರು.

ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಹೂವಿನಭಾವಿ ಬಾಬಣ್ಣ, ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ಜಿ. ಕಣ್ಣೂರು, ಹಣಕಾಸು ಅಧಿಕಾರಿ ಜಯಾಂಬಿಕಾ ಉಪಸ್ಥಿತಿರಿದ್ದರು.

ಅನ್ವಯಿಕ ವಿದ್ಯುನ್ಮಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಾರ್ಯಕ್ರಮ ಸಂಯೋಜಕ ಪ್ರೊ. ಆರ್. ಎಲ್ ರಾಯಭಾಗಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಪ್ರೊ. ರಮೇಶ್ ಲಂಡನ್ಕರ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಪ್ರೊ. ಮಲಶೆಟ್ಟಿ, ಡಾ. ಸುರೇಶ್ ಜಂಗೆ ಹಾಗೂ ಡಾ. ಟಿ. ನಿಂಗಣ್ಣ ಅತಿಥಿಗಳನ್ನು ಪರಿಚಯಿಸಿದರು. ಸಂಗೀತಾ ವಿಭಾಗದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಡಾ. ಎಂ. ಬಿ. ಕಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ವಿವಿಧ ನಿಕಾಯಗಳ ಡೀನರು, ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ ಸದಸ್ಯರು, ಸ್ನಾಕತೋತ್ತರ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ಮಹಾವಿದ್ಯಾಲಯಗಳ ಅಧ್ಯಾಪಕರು ಹಾಗೂ ರಿಲಯನ್ಸ್ ಫೌಂಡೇಶನ್ ಸ್ಕಿಲ್ಲಿಂಗ್ ಅಕಾಡೆಮಿ ಸದಸ್ಯರಾದ ರೇಖಾ ಕುಮಾರಿ, ಜಾಬೆಜ್, ಪೌಜಿತ ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X