Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕ್ಷಯರೋಗ ಮುಕ್ತ ಭಾರತ...

Kalaburagi | ಕ್ಷಯರೋಗ ಮುಕ್ತ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಿ: ಪ್ರೊ.ಬಟ್ಟು ಸತ್ಯನಾರಾಯಣ

ವಾರ್ತಾಭಾರತಿವಾರ್ತಾಭಾರತಿ15 Oct 2026 6:51 PM IST
share
Kalaburagi | ಕ್ಷಯರೋಗ ಮುಕ್ತ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಿ: ಪ್ರೊ.ಬಟ್ಟು ಸತ್ಯನಾರಾಯಣ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕ್ಷಯರೋಗ ಮುಕ್ತ ಭಾರತ ಅಭಿಯಾನ ಸಮಿತಿಯ ವತಿಯಿಂದ ಜೀವವಿಜ್ಞಾನ ನಿಕಾಯದಲ್ಲಿ ಕ್ಷಯರೋಗ ಜಾಗೃತಿ ಉಪನ್ಯಾಸ ಹಾಗೂ ಬಹುಮಾನ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಮಾತನಾಡಿ, ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಆರಂಭಿಸಲಾದ ಕ್ಷಯರೋಗ ನಿರ್ಮೂಲನಾ ಅಭಿಯಾನದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಕ್ಷಯರೋಗ ಪೀಡಿತರಿಗೆ ನೆರವು ನೀಡುವುದು ಹಾಗೂ ಕ್ಷಯರೋಗ ಮುಕ್ತ ಭಾರತ ನಿರ್ಮಾಣದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಲಬುರಗಿಯ ಇಎಸ್‌ಐಸಿ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ. ರೇವಣಸಿದ್ದ ಎಸ್. ಎ. ಅವರು ಮುಖ್ಯ ಭಾಷಣಕಾರರಾಗಿ ಮಾತನಾಡಿ, ಕ್ಷಯರೋಗದ ಹರಡುವಿಕೆ, ಲಕ್ಷಣಗಳು, ತಡೆಗಟ್ಟುವಿಕೆ, ಆರಂಭಿಕ ಪತ್ತೆ ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ಕ್ಷಯರೋಗದ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು, ರೋಗದ ಕುರಿತಾದ ಸಾಮಾಜಿಕ ಕಳಂಕವನ್ನು ಕಡಿಮೆ ಮಾಡುವುದು ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುವಲ್ಲಿ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

‘ನಿ-ಕ್ಷಯ ಮಿತ್ರ’ ಉಪಕ್ರಮದ ಕುರಿತು ವಿವರಿಸಿದ ಅವರು, ಕ್ಷಯರೋಗದಿಂದ ಬಳಲುತ್ತಿರುವವರಿಗೆ ಅಗತ್ಯ ನೆರವು ನೀಡುವ ಮಹತ್ವವನ್ನು ತಿಳಿಸಿದರು. ವೈದ್ಯರು ಸೂಚಿಸಿದ ಚಿಕಿತ್ಸೆಯನ್ನು ಪೂರ್ಣಗೊಳಿಸುವುದರಿಂದ ರೋಗ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕ್ಷಯರೋಗ ಜಾಗೃತಿ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಪೋಸ್ಟರ್ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕುಲಪತಿಗಳು ಹಾಗೂ ಗಣ್ಯರು ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು. ಬಳಿಕ ಕುಲಪತಿಗಳು, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕ್ಷಯರೋಗ ಮುಕ್ತ ಭಾರತದ ನಿರ್ಮಾಣಕ್ಕೆ ಕೈಜೋಡಿಸುವ ಪ್ರತಿಜ್ಞೆ ಸ್ವೀಕರಿಸಿದರು.

ಕ್ಷಯರೋಗ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮದ ನೋಡಲ್ ಅಧಿಕಾರಿ ಹಾಗೂ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಚೈತನ್ಯ ಸ್ವಾಗತಿಸಿದರು. ಡಾ. ಸ್ವಾತಿ ಬನಪುರಂ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಡಾ. ಕವಿಶಂಕರ್ ಗಾವ್ಲಿ, ಡಾ. ರಸ್ಮಿತಾ ಸಮಲ್, ಡಾ. ಸಿನಮ್ ಸಿಂಗ್, ಡಾ. ರಾಕೇಶ್ ಕುಮಾರ್, ಡಾ. ಪ್ರಶಾಂತ್ ಕುಮಾರ್, ಡಾ. ಪ್ರಭಂಜನ ಗಾಯಿ ಹಾಗೂ ಡಾ. ಬುಚಿ ರೆಡ್ಡಿ ಸೇರಿದಂತೆ ಬೋಧಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

TuberculosisstudentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X