Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕನಕದಾಸರ ಕೀರ್ತನೆಗಳಲ್ಲಿನ...

Kalaburagi | ಕನಕದಾಸರ ಕೀರ್ತನೆಗಳಲ್ಲಿನ ಜ್ಞಾನ, ಸಂದೇಶಗಳನ್ನು ವಿದ್ಯಾರ್ಥಿಗಳು ಅರಿಯಲಿ: ಪ್ರೊ.ಶಶಿಕಾಂತ ಉಡಿಕೇರಿ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ27 Nov 2026 10:09 PM IST
share
Kalaburagi | ಕನಕದಾಸರ ಕೀರ್ತನೆಗಳಲ್ಲಿನ ಜ್ಞಾನ, ಸಂದೇಶಗಳನ್ನು ವಿದ್ಯಾರ್ಥಿಗಳು ಅರಿಯಲಿ: ಪ್ರೊ.ಶಶಿಕಾಂತ ಉಡಿಕೇರಿ

ಕಲಬುರಗಿ: ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಸ್ಥಾಪಿಸಲು ಶ್ರಮಿಸಿದ ಪ್ರಮುಖ ದಾರ್ಶನಿಕರಲ್ಲಿ ದಾಸಶ್ರೇಷ್ಠ ಕನಕದಾಸರು ಒಬ್ಬರು. ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಕನಕದಾಸರ ಕೀರ್ತನೆಗಳಲ್ಲಿನ ಜ್ಞಾನ ಮತ್ತು ಸಂದೇಶಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ದಾಸಶ್ರೇಷ್ಠ ಶ್ರೀ ಕನಕದಾಸರ 539ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜ್ಯೋತಿ ಬೆಳಗಿಸಿದ ಬಳಿಕ ಅವರು ಮಾತನಾಡಿದರು.

ಅಲ್ಪ ಜ್ಞಾನವೇ ದೊಡ್ಡದು ಎಂಬ ಭ್ರಮೆಯಿಂದ ಸಮಾಜ ಹೊರಬರಬೇಕು. ‘ನಾನು’ ಎಂಬ ಅಜ್ಞಾನವನ್ನು ಅಳಿಸಿ ಜ್ಞಾನ ಸಂಪಾದಿಸಬೇಕು. ನಾವು ಬದಲಾದರೆ ಮಾತ್ರ ಜಗತ್ತು ಬದಲಾಗುತ್ತದೆ ಎಂಬ ವಾಸ್ತವವನ್ನು ಅರ್ಥಮಾಡಿಕೊಳ್ಳಬೇಕು. ಸನ್ಮಾರ್ಗದಲ್ಲಿ ಸಾಗಿದಾಗ ಮಾತ್ರ ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ ಹಾಗೂ ಕನಕದಾಸರಂತಹ ದಾರ್ಶನಿಕರ ವೈಚಾರಿಕ ಸಂದೇಶಗಳನ್ನು ಪಾಲಿಸಲು ಸಾಧ್ಯ. ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮೂಲಕ ಅಜ್ಞಾನ, ಮೂಢನಂಬಿಕೆ ಹಾಗೂ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಬಹುದು ಎಂಬುದು ಕನಕದಾಸರ ಚಿಂತನೆಯ ಆಶಯವಾಗಿತ್ತು ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಚಿತ್ತಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲ ಡಾ. ಟಿ.ವಿ. ಅಡಿವೇಶ, 16ನೇ ಶತಮಾನದಲ್ಲಿ ದಾಸ ಪರಂಪರೆಯ ಕೀರ್ತಿಯನ್ನು ಹೆಚ್ಚಿಸಿದ ಕನಕದಾಸರು ಶ್ರೇಷ್ಠ ಕವಿ ಹಾಗೂ ಕೀರ್ತನಕಾರರಾಗಿದ್ದರು. ಬಚ್ಚಮ್ಮ ಮತ್ತು ಬೀರಪ್ಪನಾಯಕ ದಂಪತಿಯ ಪುತ್ರನಾಗಿ ಜನಿಸಿದ ಅವರು ಕತ್ತಿವರಸೆ, ಕುದುರೆ ಸವಾರಿ ಕಲಿತಿದ್ದರು. ವ್ಯಾಕರಣ, ತರ್ಕ, ಮೀಮಾಂಸೆ ಹಾಗೂ ಸಾಹಿತ್ಯದಲ್ಲಿ ಜ್ಞಾನ ಸಂಪಾದಿಸಿದ್ದರು. ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿ ತತ್ವಶಾಸ್ತ್ರ ಅಧ್ಯಯನ ಮಾಡಿದ್ದರು. ಕಾಗಿನೆಲೆಯ ಆದಿಕೇಶವನ ಭಕ್ತರಾಗಿದ್ದ ಅವರು ಜಾತಿಪದ್ಧತಿಯನ್ನು ಟೀಕಿಸಿ ಸಮಾನತೆಯ ಸಂದೇಶ ಸಾರಿದರು. ಆಧ್ಯಾತ್ಮ ಮತ್ತು ಭಕ್ತಿಯ ಮೂಲಕ ಸಮಾಜದ ಓರೆಕೋರೆಗಳನ್ನು ತಮ್ಮ ಕೀರ್ತನೆಗಳ ಮೂಲಕ ಜನರಿಗೆ ತಿಳಿಸಿ ಜಾಗೃತಿ ಮೂಡಿಸಿದರು ಎಂದು ಹೇಳಿದರು.

ಕನಕದಾಸರ ‘ಮೋಹನ ತರಂಗಿಣಿ’, ‘ನಳಚರಿತ್ರೆ’, ‘ರಾಮಧಾನ್ಯ ಚರಿತೆ’ ಹಾಗೂ ‘ಹರಿಭಕ್ತಿಸಾರ’ ಕೃತಿಗಳ ಜೊತೆಗೆ ಅವರ ಕೀರ್ತನೆಗಳಲ್ಲಿನ ಮೌಲ್ಯಯುತ ಸಂದೇಶಗಳನ್ನು ವಿವರಿಸಿದರು.

ಮೌಲ್ಯಮಾಪನ ಕುಲಸಚಿವೆ ಹಾಗೂ ಪ್ರಭಾರಿ ಆಡಳಿತ ಕುಲಸಚಿವೆ ಪ್ರೊ. ಅಶ್ವಿನಿ ಬಿ. ಜಾನೆ ಮಾತನಾಡಿ, ಕನಕದಾಸರು ಸಾಮಾಜಿಕ ಚಿಂತಕರಾಗಿದ್ದರು. ಪ್ರಾಚೀನ ಸಮಾಜದಲ್ಲಿ ಜಾತಿಯ ಕಹಿಬೇರುಗಳು ಗಟ್ಟಿಯಾಗಿ ಬೇರೂರಿದ್ದವು. ಪ್ರಸ್ತುತವೂ ಜಾತಿಪದ್ಧತಿ ಜನಮನವನ್ನು ಬಾಧಿಸುತ್ತಿದೆ. ದಾಸರ ಕಾಲದಲ್ಲಿ ಭಕ್ತಿಯ ಶಕ್ತಿಯ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದ ಕನಕದಾಸರು ಸದ್ಭಾವನೆ ಮತ್ತು ಸದ್ವಿಚಾರಗಳನ್ನು ಆಧ್ಯಾತ್ಮ ಹಾಗೂ ಭಕ್ತಿಯ ನೆಲೆಯಲ್ಲಿ ಜನರಿಗೆ ಹಂಚಿದರು. ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದರು.

ಸಂತ ಕನಕದಾಸ ಜಯಂತ್ಯುತ್ಸವದ ಸಂಚಾಲಕ ಬಿ.ಎಂ. ರುದ್ರವಾಡಿ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, 15 ಮತ್ತು 16ನೇ ಶತಮಾನಗಳ ದಾಸ ಸಾಹಿತ್ಯದ ಸುವರ್ಣಯುಗದ ಪ್ರವರ್ತಕರಲ್ಲಿ ಕನಕದಾಸರು ಒಬ್ಬರು. ಜಾತಿ ತಾರತಮ್ಯ ಮತ್ತು ಅಸಮಾನತೆಯ ವಿರುದ್ಧ ಕೀರ್ತನೆಗಳನ್ನು ರಚಿಸಿ, ಸಮಾಜದ ಅಂಕುಡೊಂಕುಗಳ ಬಗ್ಗೆ ಎಚ್ಚರಿಸಿದರು. ಸುಮಾರು 316 ಕೀರ್ತನೆಗಳ ಮೂಲಕ ದೈವಭಕ್ತಿಯೊಂದಿಗೆ ಜೀವನದರ್ಶನ ಮಾಡಿಸಿದ ಮಹಾನ್ ಸಂತರು ಎಂದು ಹೇಳಿದರು.

ಸಿಂಡಿಕೇಟ್ ಸದಸ್ಯ ಡಾ. ಪೀರ್‌ಜಾದೆ ಫಹೀಮುದ್ದೀನ್, ವಿದ್ಯಾವಿಷಯಕ ಪರಿಷತ್ ಸದಸ್ಯ ಪ್ರೊ. ದಶರಥ ನಾಯ್ಕ, ಹಣಕಾಸು ಅಧಿಕಾರಿ ಜಯಾಂಬಿಕ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಂಗೀತ ವಿಭಾಗದ ಅತಿಥಿ ಅಧ್ಯಾಪಕರಾದ ಡಾ. ಜಯದಾನಮ್ಮ, ಸಿದ್ದಾರ್ಥ್ ಚಿನ್ಮಯಿ ಇದ್ಲಾಯಿ ಹಾಗೂ ಸಂಗಡಿಗರು ರಾಷ್ಟ್ರಗೀತೆ, ನಾಡಗೀತೆ ಮತ್ತು ಕೀರ್ತನೆಗಳನ್ನು ಪ್ರಸ್ತುತಪಡಿಸಿದರು. ಡಾ. ಚಂದ್ರಕಾಂತ ಬಿರಾದಾರ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರ್ವಹಿಸಿದರು. ಆಡಳಿತ ವಿಶೇಷಾಧಿಕಾರಿ ಪ್ರೊ. ರಮೇಶ್ ರಾಠೋಡ್ ವಂದಿಸಿದರು.

Tags

KalaburagiStudentsKanakadasa
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X