Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯಾರ್ಥಿಗಳು ತಮ್ಮನ್ನು...

Kalaburagi | ವಿದ್ಯಾರ್ಥಿಗಳು ತಮ್ಮನ್ನು ತಾವು ಅರಿತು, ಪ್ರೀತಿಸಿಕೊಳ್ಳಬೇಕು: ಡಾ.ಶಾಂತಾ ಭೀಮಸೇನರಾವ್

ವಾರ್ತಾಭಾರತಿವಾರ್ತಾಭಾರತಿ22 Aug 2026 8:24 PM IST
share
Kalaburagi | ವಿದ್ಯಾರ್ಥಿಗಳು ತಮ್ಮನ್ನು ತಾವು ಅರಿತು, ಪ್ರೀತಿಸಿಕೊಳ್ಳಬೇಕು: ಡಾ.ಶಾಂತಾ ಭೀಮಸೇನರಾವ್

ಕಲಬುರಗಿ: ವಿದ್ಯಾರ್ಥಿ ಜೀವನವು ಮನುಷ್ಯನ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಈ ಅವಧಿಯಲ್ಲಿ ರೂಪುಗೊಳ್ಳುವ ಆಲೋಚನೆಗಳು, ಅಭ್ಯಾಸಗಳು, ಸ್ನೇಹಗಳು, ಮೌಲ್ಯಗಳು ಹಾಗೂ ಗುರಿಗಳು ಮುಂದಿನ ಜೀವನದ ದಿಕ್ಕನ್ನು ನಿರ್ಧರಿಸುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಪುಸ್ತಕದ ಜ್ಞಾನ ಪಡೆಯುವುದರ ಜೊತೆಗೆ ತಮ್ಮನ್ನು ತಾವು ಅರಿತುಕೊಂಡು, ಪ್ರೀತಿಸಿಕೊಳ್ಳುವುದನ್ನು ಕಲಿಯಬೇಕು ಎಂದು ಎಂ.ಎಸ್. ಇರಾಣಿ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ. ಶಾಂತಾ ಭೀಮಸೇನರಾವ್ ಹೇಳಿದರು.

ನಗರದ ಎಂ.ಎಸ್. ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುವುದು ಸಾಮಾನ್ಯವಾಗಿದೆ. ‘ಅವನಿಗೆ ಹೆಚ್ಚು ಅಂಕ ಬಂದಿದೆ’, ‘ಅವಳು ನನ್ನಿಗಿಂತ ಚೆನ್ನಾಗಿ ಮಾತನಾಡುತ್ತಾಳೆ’, ‘ಅವನು ನನ್ನಿಗಿಂತ ಹೆಚ್ಚು ಪ್ರತಿಭಾವಂತ’ ಎಂಬ ಆಲೋಚನೆಗಳು ಆತ್ಮವಿಶ್ವಾಸವನ್ನು ಕುಗ್ಗಿಸುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನದೇ ಆದ ಪ್ರತಿಭೆ ಮತ್ತು ಸಾಮರ್ಥ್ಯ ಹೊಂದಿರುತ್ತಾನೆ. ಹೀಗಾಗಿ ಇತರರೊಂದಿಗೆ ಹೋಲಿಸಿಕೊಳ್ಳದೆ ತಮ್ಮಲ್ಲಿರುವ ಸಾಮರ್ಥ್ಯವನ್ನು ಗುರುತಿಸಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಾಗ ತಮ್ಮನ್ನು ತಾವು ವಿಫಲರೆಂದು ಭಾವಿಸಬಾರದು. ಒಂದು ಪರೀಕ್ಷೆಯ ಫಲಿತಾಂಶವು ವ್ಯಕ್ತಿಯ ಸಂಪೂರ್ಣ ಸಾಮರ್ಥ್ಯ ಅಥವಾ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ. ಕಡಿಮೆ ಅಂಕ ಬಂದಾಗ ತಮ್ಮನ್ನು ದೂಷಿಸಿಕೊಳ್ಳುವ ಬದಲು, ‘ಎಲ್ಲಿ ತಪ್ಪಾಗಿದೆ?’, ‘ಓದುವ ವಿಧಾನದಲ್ಲಿ ಏನು ಬದಲಾವಣೆ ಮಾಡಬೇಕು?’, ‘ಮುಂದಿನ ಬಾರಿ ಹೇಗೆ ಉತ್ತಮ ಸಾಧನೆ ಮಾಡಬಹುದು?’ ಎಂಬ ಪ್ರಶ್ನೆಗಳನ್ನು ಕೇಳಿಕೊಳ್ಳಬೇಕು. ವಿಫಲತೆ ಅಂತ್ಯವಲ್ಲ; ಅದು ಹೊಸ ಪ್ರಯತ್ನಕ್ಕೆ ದಾರಿ ತೋರಿಸುವ ಪಾಠ ಎಂದು ಹೇಳಿದರು.

ಇಂದಿನ ವಿದ್ಯಾರ್ಥಿಗಳ ಜೀವನದಲ್ಲಿ ಮೊಬೈಲ್ ಅವಿಭಾಜ್ಯವಾಗಿದ್ದು, ಜ್ಞಾನ ಸಂಪಾದನೆ ಹಾಗೂ ಕಲಿಕೆಗೆ ತಂತ್ರಜ್ಞಾನ ಬಹಳ ಉಪಯುಕ್ತವಾಗಿದೆ. ಆದರೆ ಮೊಬೈಲ್‌ನ ಅತಿಯಾದ ಬಳಕೆಯಿಂದ ಸಮಯ, ಏಕಾಗ್ರತೆ ಹಾಗೂ ನಿದ್ರೆ ಹಾಳಾಗಬಹುದು. ಹೀಗಾಗಿ ವಿದ್ಯಾರ್ಥಿಗಳು ಮೊಬೈಲ್‌ನ್ನು ಅಗತ್ಯಕ್ಕೆ ತಕ್ಕಂತೆ ಬಳಸಬೇಕು. ಓದುವ ಸಂದರ್ಭದಲ್ಲಿ ಗಮನ ಬೇರೆಡೆ ಸೆಳೆಯುವ ಸೂಚನೆಗಳನ್ನು ನಿಯಂತ್ರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಇತರರ ಜೀವನವನ್ನು ತಮ್ಮ ಜೀವನದೊಂದಿಗೆ ಹೋಲಿಸಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಶಿಲ್ಪಾ ಅಲ್ಲದ ಮಾತನಾಡಿದರು. ಕಾರ್ಯಕ್ರಮದ ನಿರ್ದೇಶಕಿ ಹಾಗೂ ಉಪನ್ಯಾಸಕಿ ಶ್ವೇತಾ ಶೆಟ್ಟಿ, ಸಂಗೀತಾ ಸಡಕೀನ್, ಡಾ. ಪಾಂಡುರಂಗ ಚಿಂಚನಸೂರ, ಚಂದ್ರಶೇಖರ್ ಪಟ್ಟಣಕರ್, ಡಾ. ಕೃಷ್ಣವೇಣಿ ಪಾಟೀಲ್, ಆನಂದ ಕೊಪ್ಪದ, ರಾಮು ಕಟ್ಟಿ, ಉಷಾ ಪಾಟೀಲ್, ಮಧುಶ್ರೀ ಘಂಟಿ, ವಿಜಯಲಕ್ಷ್ಮೀ ಶಾಬಾದಿ ಹಾಗೂ ಸವಿತಾ ಪಾಟೀಲ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ನಂದಿತಾ ವಂದಿಸಿದರು.

Tags

studentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X