Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯಾರ್ಥಿಗಳು ಏಕತೆ,...

Kalaburagi | ವಿದ್ಯಾರ್ಥಿಗಳು ಏಕತೆ, ಐಕ್ಯತೆಯ ಮೌಲ್ಯ ಮೈಗೂಡಿಸಿಕೊಳ್ಳಲಿ: ಎಸ್.ಪಿ. ಸುಳ್ಳದ

ವಾರ್ತಾಭಾರತಿವಾರ್ತಾಭಾರತಿ4 Nov 2026 5:42 PM IST
share
Kalaburagi | ವಿದ್ಯಾರ್ಥಿಗಳು ಏಕತೆ, ಐಕ್ಯತೆಯ ಮೌಲ್ಯ ಮೈಗೂಡಿಸಿಕೊಳ್ಳಲಿ: ಎಸ್.ಪಿ. ಸುಳ್ಳದ

ಕಲಬುರಗಿ: ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ದೇಶದ ಏಕತೆ ಹಾಗೂ ಐಕ್ಯತೆಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಬೇಕು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸುಳ್ಳದ ಕರೆ ನೀಡಿದರು.

ನಗರದ ಅಪ್ಪಾ ಪಬ್ಲಿಕ್ ಸ್ಕೂಲ್‌ನಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ವಿಭಾಗ ಮಟ್ಟದ ದೇಶಭಕ್ತಿ ಹಾಗೂ ಜಾನಪದ ಗೀತ ಗಾಯನ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹಾರೈಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಎಸ್ಕಾರ್ಟ್ ಮೂಲಕ ಸ್ವಾಗತಿಸಿದರು. ಸಾಮೂಹಿಕ ಪ್ರಾರ್ಥನೆಯೊಂದಿಗೆ ವೇದಿಕೆ ಕಾರ್ಯಕ್ರಮ ಆರಂಭಗೊಂಡಿತು. ಗಣ್ಯರು ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಜಿಲ್ಲಾ ಕಾರ್ಯದರ್ಶಿ ಪೀರಪ್ಪ ಹೂಗುಂಡ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗೀಯ ಸಹಾಯಕ ಆಯುಕ್ತ ಸಿ.ಬಿ. ಪಾಟೀಲ ಓಕಳೆ ಅವರು ಸಸಿಗೆ ನೀರುಣಿಸಿ, ಡೊಳ್ಳು ಬಾರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಅಧ್ಯಕ್ಷ ಬಸವರಾಜ ಬಳೂಂಡಗಿ ಸ್ಪರ್ಧಾರ್ಥಿಗಳಿಗೆ ಶುಭ ಹಾರೈಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ ಹೂಗಾರ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಸಂತೋಷ ಗಂಗೂ ಸ್ಪರ್ಧೆ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕಲಬುರಗಿ ದಕ್ಷಿಣ ಕ್ಷೇತ್ರದ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ಜಿಲ್ಲಾ ಉಪಾಧ್ಯಕ್ಷರಾದ ಸೈಯದ್ ಮೊಹಮ್ಮದ್, ಸುಜಾತಾ ಮುಲ್ಲಾ, ಜಿಲ್ಲಾ ಜಂಟಿ ಕಾರ್ಯದರ್ಶಿ ರಾಜಕುಮಾರ ಮರಾಠೆ, ಜಿಲ್ಲಾ ಖಜಾಂಚಿ ಪ್ರಮೀಳಾ ಪಾಟೀಲ, ಬೀದರ್ ಜಿಲ್ಲಾ ಕಾರ್ಯದರ್ಶಿ ರಮೇಶ್ ತಿಪಶೆಟ್ಟಿ, ಅಪ್ಪಾ ಪಬ್ಲಿಕ್ ಸ್ಕೂಲ್ ಪ್ರಾಚಾರ್ಯ ಶಂಕರಗೌಡ ಹೊಸಮನಿ, ಚಿತ್ತಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಟಾಳೆ, ಅಮರೇಶ ಕೂರಿ (ಡಿಟಿಸಿ-ಎಸ್), ಸುಮಂಗಲಾ ಎನ್.ಎಂ. (ಡಿಟಿಸಿ-ಜಿ), ಚಿತ್ತಾಪುರ ತಾಲೂಕು ಕಾರ್ಯದರ್ಶಿಗಳಾದ ರಾಣಪ್ಪ ಸಂಗನ ಹಾಗೂ ನರಸಿಂಗ್ ರಾಠೋಡ ಉಪಸ್ಥಿತರಿದ್ದರು.

ಸ್ಪರ್ಧೆಯ ಯಶಸ್ವಿಗೆ ಸಂಗೀತಾ ತಿವಾರಿ, ಶೋಭಾ ಸಿಂಗೆ ಹಾಗೂ ಶಿವಲೀಲಾ ಎಸ್. ಕಲಗುರಕಿ ಸಹಕರಿಸಿದರು. ಸಂಗೀತ ಶಿಕ್ಷಕರು ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು.

ಕಲಬುರಗಿ ಉತ್ತರ ತಾಲೂಕು ಕಾರ್ಯದರ್ಶಿ ಜಯಪ್ರಕಾಶ್ ಕಟ್ಟಿಮನಿ ನಿರೂಪಿಸಿದರು. ಕಲಬುರಗಿ ದಕ್ಷಿಣ ತಾಲೂಕು ಕಾರ್ಯದರ್ಶಿ ಗುರುಲಿಂಗಯ್ಯ ಹಿರೇಮಠ ವಂದಿಸಿದರು.

Tags

studentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X