ಕಲಬುರಗಿ| ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಸುನೀಲ್ ಕುಮಾರ್ ದೊಡ್ಡಮನಿ ಅವರಿಗೆ ಸನ್ಮಾನ

ಕಲಬುರಗಿ: ಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕರಾಗಿ ಆಯ್ಕೆಯಾದ ಸುನೀಲ್ ಕುಮಾರ್ ದೊಡ್ಡಮನಿ ಅವರಿಗೆ ಚಿತ್ತಾಪುರ ಪಟ್ಟಣದಲ್ಲಿ ಮುಸ್ಲಿಂ ಸಮಾಜದ ಯುವ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಸನ್ಮಾನ ಕೂಡ ನಡೆಯಿತು.
ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಯುವ ಮುಖಂಡರಾದ ಶೇಖ ಬಬ್ಲು, ಮುಹಮ್ಮದ್ ಖಾಸೀಂ, ಮುಹ್ಮದ್ ರಫೀಕ್, ಎಂ.ಎ ನಯೀಮ್, ಮುಹ್ಮದ್ ಸೀರಾಜ್, ಮುಜೀಬ್ ಸೇಠ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story





