Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸ್ವಚ್ಛ ಭಾರತ ನಿರ್ಮಾಣ...

Kalaburagi | ಸ್ವಚ್ಛ ಭಾರತ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯ : ಮೇಯರ್ ವರ್ಷಾ ಜಾನೆ

ವಾರ್ತಾಭಾರತಿವಾರ್ತಾಭಾರತಿ14 Aug 2026 3:02 PM IST
share
Kalaburagi | ಸ್ವಚ್ಛ ಭಾರತ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯ : ಮೇಯರ್ ವರ್ಷಾ ಜಾನೆ
ಸ್ವಚ್ಛತೆ, ರಾಷ್ಟ್ರಪ್ರೇಮದ ಸಂದೇಶ ಸಾರಿದ ‘ರನ್ ಫಾರ್ ಶತಾಭಿಷೇಕಂ’ ಮ್ಯಾರಥಾನ್

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಚ್ಛತೆ, ರಾಷ್ಟ್ರಪ್ರೇಮ ಹಾಗೂ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಕಲಬುರಗಿ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ‘ರನ್ ಫಾರ್ ಶತಾಭಿಷೇಕಂ’ ಮ್ಯಾರಥಾನ್ ಹಾಗೂ ಸೈಕ್ಲೋಥಾನ್ ಆಯೋಜಿಸಲಾಯಿತು.

ನಗರದ ಕಲಬುರಗಿ ಕೋಟೆಯಿಂದ ಆರಂಭವಾದ ಮ್ಯಾರಥಾನ್ ಹಾಗೂ ಸೈಕ್ಲೋಥಾನ್ ಜಗತ್ ವೃತ್ತದ ಮೂಲಕ ತಿಮ್ಮಾಪುರ ವೃತ್ತದವರೆಗೆ ಸಾಗಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಮೇಯರ್ ವರ್ಷಾ ಜಾನೆ, ಸ್ವಚ್ಛ ಭಾರತ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಹಸಿ ಮತ್ತು ಒಣಕಸವನ್ನು ಪ್ರತ್ಯೇಕಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಕರೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ನಗರವನ್ನು ಸ್ವಚ್ಛವಾಗಿಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಸ್ವಚ್ಛ ಪರಿಸರ ಆರೋಗ್ಯಕರ ಜೀವನಕ್ಕೆ ಪೂರಕವಾಗಿದ್ದು, ಪ್ರತಿಯೊಬ್ಬರೂ ಮನೆ, ವಾರ್ಡ್ ಹಾಗೂ ನಗರದ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಜಿಪಂ ಸಿಇಒ ರಾಹುಲ್ ಸಂಕನೂರ ಮಾತನಾಡಿ, ನಗರದ ಸ್ವಚ್ಛತೆ ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗೂ ಪೂರಕವಾಗಿದೆ. ಹೊರಗಿನಿಂದ ಬರುವವರು ಮೊದಲು ನಗರದ ಸ್ವಚ್ಛತೆಯನ್ನು ಗಮನಿಸುತ್ತಾರೆ. ಸ್ವಚ್ಛತೆಯಿಂದ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಡಿಸಿಎಫ್ ಆಶಿಶ್ ರೆಡ್ಡಿ ಮಾತನಾಡಿ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ ಮಾತನಾಡಿ, ಏಕಬಳಕೆ ಪ್ಲಾಸ್ಟಿಕ್‌ನ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಸೈಕ್ಲೋಥಾನ್‌ನಲ್ಲಿ ದತ್ತಾತ್ರೇಯ ದೀಪಕ್ ಪ್ರಥಮ, ವೆಂಕಟೇಶ್ ಮುರಳೀಧರ ದ್ವಿತೀಯ ಹಾಗೂ ಲಕ್ಷ್ಮೀಪುತ್ರ ಗುರುಲಿಂಗಪ್ಪ ತೃತೀಯ ಸ್ಥಾನ ಪಡೆದರು. ಮ್ಯಾರಥಾನ್‌ನಲ್ಲಿ ಪ್ರತೀಕ್, ಶ್ರೀಲಕ್ಷ್ಮಿ ಹಾಗೂ ರಾಹುಲ್ ರಾನೋಜಿ ಗಮನಾರ್ಹ ಸಾಧನೆ ಮಾಡಿದರು.

ನಂತರ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಹಾಗೂ ಟಾಯ್‌ಕಥಾನ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸ್ವಾತಂತ್ರ್ಯದ ಮೌಲ್ಯಗಳೊಂದಿಗೆ ಸ್ವಚ್ಛ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣಕ್ಕೆ ಯುವಜನತೆ ಮತ್ತು ಮಕ್ಕಳನ್ನು ಪ್ರೇರೇಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಪಾಲಿಕೆಯ ಸದಸ್ಯರಾದ ಅನುಪಮಾ ಕಮಕನೂರ, ಅಯಾಜ್ ಖಾನ್, ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಡಿಸಿಪಿ ಶಾಲೂ, ಡಿಸಿಎಫ್ ಆಶಿಶ್ ರೆಡ್ಡಿ ಸೇರಿದಂತೆ, ಪಾಲಿಕೆಯ ಅಧಿಕಾರಿ, ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

Tags

Swachh Bharat NirmanKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X