ಕಲಬುರಗಿ | ಸ್ವಾಮಿ ವಿವೇಕಾನಂದರು ಯುವಕರಿಗೆ ಸ್ಪೂರ್ತಿ : ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ಸ್ವಾಮಿ ವಿವೇಕಾನಂದರ ಸಮಗ್ರ ಜೀವನ ಮತ್ತು ಸಂಘರ್ಷ ಇಂದಿನ ಯುವಕರಿಗೆ ಸ್ಫೂರ್ತಿಯಾಗಿದೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.
ಅವರು ನಗರದ ರಂಗಮಂದಿರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ ರಾಮಕೃಷ್ಣ ವಿವೇಕಾನಂದ್ ಆಶ್ರಮ ವತಿಯಿಂದ ಏರ್ಪಡಿಸಿದ ಸ್ವಾಮಿ ವಿವೇಕಾನಂದ ಅವರ ಜಯಂತಿಯ ಕುರಿತಾದ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು.
ರಾಮಕೃಷ್ಣ ಆಶ್ರಮದ ಮಹೇಶ್ವರನಂದ ಸ್ವಾಮೀಜಿ ಮಾತನಾಡಿ, ವಿವೇಕಾನಂದರ ಬದಕು ತತ್ವ ಆದರ್ಶಗಳು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಬೇಕು. ಸ್ವಾಮಿ ವಿವೇಕಾನಂದರು ಅವರು ಬಾಲ್ಯದಿಂದಲೂ ಆಧ್ಯಾತ್ಮಿಕದ ಕಡೆಗೆ ಮುಖಮಾಡಿ ಯುವಜನಾಂಗಕ್ಕೆ ಮಾರ್ಗದರ್ಶನ ಮಾಡಿದ್ದಾರೆ. ಏಳಿ ಎದ್ದೇಳಿ ಗುರಿ ಮುಟ್ಟದವರೆಗೆ ನಿಲ್ಲದಿರಿ ಎಂಬಂತಹ ಮಾತುಗಳು ಯುವಜನಾಂಗದ ಬದುಕನ್ನು ಬದಲಾಯಿಸಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುರೇಶ ಬಡಿಗೇರ, ಸ್ವಾಮಿ ವಿವೇಕಾನಂದರು ಯುವಕರಿಗೆ ಒಳ್ಳೆಯ ದಾರಿಯಲ್ಲಿ ನಡೆಯಲು ಅನೇಕ ಮಾರ್ಗದರ್ಶನವನ್ನು ನೀಡುವುದರ ಜೊತೆಗೆ ಇಂದಿನ ಯುವಕರಿಗೆ ಐಕಾನ್ ಆಗಿದ್ದಾರೆ ಎಂದು ಹೇಳಿದರು.
ನಿವೃತ್ತ ಪ್ರಚಾರ್ಯರಾದ ನರೇಂದ್ರ ಬಡಶೇಷಿಯವರು ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸವನು ನೀಡಿದರು.
ಇದೇ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಜಯ ಬಾಣದ, ಪ್ರವೀಣ್ ಪುಣೆ, ರಾಜು ಚವಾಣ್, ದೇವೇಂದ್ರ ಸೇರಿದಂತೆ ಹಲವರು ಹಾಜರಿದ್ದರು.







