ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ಸದ್ಭಾವನಾ ಪ್ರತಿಜ್ಞಾ ವಿಧಿ ಸ್ವೀಕಾರ

ಕಲಬುರಗಿ: ಸದ್ಭಾವನಾ ದಿನಾಚರಣೆ ನಿಮಿತ್ತ ನಗರದ ಹೊರವಲಯದ ಕೇಂದ್ರ ಕಾರಾಗೃಹದಲ್ಲಿ ಮುಖ್ಯ ಅಧೀಕ್ಷಕರಾದ ಡಾ.ಅನಿತಾ ಆರ್. ಅವರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿಗಳು ಬುಧವಾರ ಸದ್ಭಾವನಾ ಪ್ರಮಾಣ ವಚನ ಸ್ವೀಕರಿಸಿದರು .
ಈ ವೇಳೆ ಮಾತನಾಡಿದ ಕಾರಾಗೃಹ ಅಧಿಕ್ಷಕಿ ಡಾ.ಅನಿತಾ ಆರ್. ಅವರು, ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದಹತೆಯನ್ನು ಉತ್ತೇಜಿಸಿ ಎಲ್ಲಾರಲ್ಲೂ ಸದ್ಭಾವನೆ ಮೂಡಿಸಿ ಹಿಂಸಾಚಾರ ತ್ಯಜಿಸುವಂತೆ, ವೈಯಕ್ತಿಕ ಮತ್ತು ಸಾಮೂಹಿಕವಾಗಿ ಕಾರ್ಯಕ್ಷೇತ್ರದಲ್ಲಿ ಯಾವುದೇ ಜಾತಿ, ಧರ್ಮದ ಬಗ್ಗೆ ಬೇಧ ಭಾವಗಳನ್ನು ಮಾಡದೇ ಎಲ್ಲರೂ ಒಟ್ಟಾಗಿ ಸಮಾಲೋಚಿಸಿ ಕಾನೂನಾತ್ಮಕವಾಗಿ ಕ್ರಮಗಳ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ಎಂ.ಹೆಚ್.ಆಶೇಖಾನ್, ಕಚೇರಿಯ ಸಹಾಯಕ ಅಧೀಕ್ಷಕರಾದ ಚನ್ನಪ್ಪ, ಸಂಸ್ಥೆಯ ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ ಡಾಂಗೆ, ಜೈಲರ್‌ಗಳಾದ ಸುನಂದ ವಿ., ಶ್ರೀಮಂತಗೌಡ ಪಾಟೀಲ್, ಶಿಕ್ಷಕರಾದ ನಾಗರಾಜ ಮುಲಗೆ ಸೇರಿದಂತೆ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದರು.





