Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸರ್ಕಾರಿ ನೌಕರರ ಮಕ್ಕಳಿಗೆ...

Kalaburagi | ಸರ್ಕಾರಿ ನೌಕರರ ಮಕ್ಕಳಿಗೆ ಆ.22ರಂದು ಪ್ರತಿಭಾ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ19 Aug 2026 7:11 PM IST
share
Kalaburagi | ಸರ್ಕಾರಿ ನೌಕರರ ಮಕ್ಕಳಿಗೆ ಆ.22ರಂದು ಪ್ರತಿಭಾ ಪುರಸ್ಕಾರ

ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2025–26ನೇ ಸಾಲಿನಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಕಲಬುರಗಿ ವಿಭಾಗದ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಆ.22ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.22ರಂದು ಮಧ್ಯಾಹ್ನ 2 ಗಂಟೆಗೆ ಸೇಡಂ ರಸ್ತೆಯ ಹಳೆಯ ಆರ್‌ಟಿಒ ಕಚೇರಿ ಎದುರಿನ ಎಂ.ಆರ್.ಎಂ.ಸಿ ಸ್ಯಾಕ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

ಪ.ಬ್ರ. ಶ್ರೀ ಸೋಮಶೇಖರ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಗೃಹ ಹಾಗೂ ಐಟಿ–ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಹಾಗೂ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

552 ವಿದ್ಯಾರ್ಥಿಗಳಿಗೆ ಪುರಸ್ಕಾರ :

ಕಲಬುರಗಿ ಜಿಲ್ಲೆಯಿಂದ 286, ಬೀದರ್‌ನಿಂದ 156 ಹಾಗೂ ಯಾದಗಿರಿಯಿಂದ 110 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 552 ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ತಲಾ 2,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಒಟ್ಟು 11.04 ಲಕ್ಷ ರೂ. ವಿತರಿಸಲಾಗುವುದು ಎಂದು ಬಸವರಾಜ ಬಳೂಂಡಗಿ ತಿಳಿಸಿದರು.

ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ನೌಕರರು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಚಂದ್ರಕಾಂತ ಏರಿ, ಶ್ರೀಮಂತ ಪಾಟೇದಾರ, ಧರ್ಮರಾಯ ಜವಳಿ, ಕೃಷ್ಣಾಚಾರ್ಯ, ಎಂ.ಬಿ. ಪಾಟೀಲ, ಪ್ರಕಾಶ್ ಉದನೂರ, ಸುರೇಶ್ ವಗ್ಗೆ, ಸಿದ್ದಲಿಂಗಯ್ಯ ಮಠಪತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X