Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ತಾಲೂಕು 9ನೇ ಕನ್ನಡ ಸಾಹಿತ್ಯ...

ಕಲಬುರಗಿ | ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ : ಗಮನ ಸೆಳೆದ ಸಾಹಿತ್ಯ ಸಿಂಚನ ಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ6 Sept 2025 10:26 PM IST
share
ಕಲಬುರಗಿ | ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ : ಗಮನ ಸೆಳೆದ ಸಾಹಿತ್ಯ ಸಿಂಚನ ಗೋಷ್ಠಿ

ಕಲಬುರಗಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕನ್ನಡ ಭವನದಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕುವೆಂಪು ಭಾಷಾ ಪ್ರಾಧಿಕಾರದ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟಿ, ಜನಪದಕಾರರು, ತತ್ವಪದಕಾರರು ಈ ನಾಡು ಮತ್ತು ದೇಶಕ್ಕೆ ಬಹು ಮೌಲಿಕ ಕೊಡುಗೆ ನೀಡಿದ್ದಾರೆ. ಸಾಹಿತ್ಯ ಉತ್ಪನ್ನವಾಗದೆ ಪ್ರಕ್ರಿಯೆ ರೀತಿಯಲ್ಲಿ ಸಾಹಿತ್ಯ ರಚಿಸಬೇಕಾಗಿದೆ. ವಿಮರ್ಶಕನು ವಿಶ್ಲೇಷಣೆ ಮಾಡುವ ಜವಬ್ದಾರಿ ಹೆಚ್ಚಿದೆ. ಪರಂಪರೆಯಿoದ ಹೊಸ ವ್ಯವಸ್ಥೆಯನ್ನು ಕಟ್ಟಬೇಕು. ಇಂಥ ಹೊಸ ಸಿದ್ದಾಂತ ಇಂದಿನ ಯುವ ಬರಹಗಾರರು ಅನುಸರಿಸಬೇಕೆಂದರು.

ಸಮ್ಮೇಳನಾಧ್ಯಕ್ಷ ಡಾ. ಶ್ರೀಶೈಲ ನಾಗರಾಳ ಮಾತನಾಡಿ, ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾಗಿರುವ ಕಲಬುರಗಿ ತನ್ನದೇ ಆದ ವಿಶಿಷ್ಟ ಇತಿಹಾಸ-ಪರಂಪರೆ ಹೊಂದಿದೆ ಎಂದು ಹೇಳಿದರು. ಮೌರ್ಯ, ಶಾತವಾಹನ, ಕಲ್ಯಾಣ ಚಾಲೂಕ್ಯರು, ಬಹಮನಿ ಸುಲ್ತಾನರು, ಅದಿಲ್ ಶಾಹಿ ಹಾಗೂ ನಿಜಾಮ ಅರಸರು ಆಳ್ವಿಕೆ ನಡೆಸಿದ್ದಾರೆ. ಆಯಾ ಕಾಲಘಟ್ಟದಲ್ಲಿ ಕಲೆ, ಸಾಹಿತ್ಯ, ಧಮ್, ಭಾಷೆ, ಸಂಸ್ಕೃತಿ ಬೆಳೆದು ಬಂದಿದೆ ಎಂದರು. ಶಿವಕೋಟ್ಯಾಚಾರ್ಯರ ವಡ್ಡಾರಾಧನೆ, ನೃಪತುಂಗನ ಕವಿರಾಜ ಮಾರ್ಗ, ವಚನ ಸಾಹಿತ್ಯ, ತತ್ವಪದ ಸಾಹಿತ್ಯ, ಸೂಫಿ ಸಂತರ ತವರೂರು ಇದಾಗಿದೆ ಎಂದು ಅಭಿಪ್ರಾಯಪಟ್ಟರು.

ಕಲಬುರಗಿ ಶಿಕ್ಷಣ ಕಾಶಿ, ಪುಸ್ತಕ ಕಾಶಿಯೂ ಅಗಿದ್ದು, ಈ ನೆಲದಲ್ಲಿ ಈವರೆಗೆ ನಾಲ್ಕು ಅಖಿಲ ಭಾರತ ಸಾಹಿತ್ಯ ಸಮ್ಮೇಳನ, 21 ಜಿಲ್ಲಾ ಸಮ್ಮೇಳನ, 9 ತಾಲೂಕು ಸಮ್ಮೇಳನ ನಡೆದಿವೆ. ಆ ಮೂಲಕ ಕಲಬುರಗಿ ಭೌತಿಕವಾಗಿ ಮತ್ತು ಬೌಧ್ಧಿಕವಾಗಿ ಸಾಕಷ್ಟು ಪ್ರಗತಿ ಕಂಡಿದೆ ಎಂದರು. ಆದರೆ ಶಾಲಾ ಕಾಲೇಜು ಹಂತದ ಪಠ್ಯ ಪುಸ್ತಕಗಳಲ್ಲಿ ಈ ಭಾಗದ ಲೇಖಕರ, ಕವಿಗಳ ಜೀವನ ಚರಿತ್ರೆಯನ್ನು ಸೇರಿಸಬೇಕು ಎಂದು ಆಗ್ರಹಿಸಿದರು.

ಜಾನಪದ ಸಮಾಜೋ ಸಂಸ್ಕೃತಿ ಕೃತಿ ಬಿಡುಗಡೆ ಮಾಡಿದ ಗುಲಬರ್ಗಾ ವಿವಿ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ. ಹೆಚ್.ಟಿ. ಪೋತೆ, ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಾಂಸ್ಕೃತಿಕವಾಗಿ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಮನವಿ ಮಾಡಿದರೂ ಬೇಡಿಕೆ ಈಡೇರಿಲ್ಲ. ಸೃಜನಶೀಲ ಕಥೆಗೆ ಸಿಕ್ಕ ಗೌರವ ಜನಪದ ಸಾಹಿತ್ಯಕ್ಕೆ ಸಿಗುತ್ತಿಲ್ಲ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸಮ್ಮೇಳನದ ನೇತೃತ್ವ ವಹಿಸಿದ್ದರು. ತಾಲೂಕಾಧ್ಯಕ್ಷೆ ಶಿವಲೀಲಾ ಕಲಗುರ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಹಿತ್ಯ ಪ್ರೇರಕರಾದ ಲಕ್ಷ್ಮೀ ದತ್ತಾತ್ರೇಯ ಪಾಟೀಲ ರೇವೂರ ಅವರು ಕವಿ ಹೂವಾನಂದ ಸಲಗಾರ ಅವರ ಜಗದ ಜನಕ ಕೃತಿ ಬಿಡುಗಡೆ ಮಾಡಿದರು. ಸಮ್ಮೇಳನದ ಸ್ಮರಣ ಸಂಚಿಕೆ ಕಾವ್ಯ ಕಳಸ ಕೃತಿಯನ್ನು ಸಾಹಿತ್ಯ ಪ್ರೇರಕಿ ಜಯಶ್ರೀ ಬಸವರಾಜ ಮತ್ತಿಮೂಡ ಬಿಡುಗಡೆಗೊಳಿಸಿದರು.

ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಪ್ರಮೀಳಾ ಜಾನಪ್ಪಗೌಡ ಚಿಂಚೋಳಿ ಮಾತನಾಡಿದರು. ಸ್ವಾಗತ ಸಮಿತಿಯ ದಯಾನಂದ ದೇವರಮನಿ, ವಿಶ್ವನಾಥ ಹುಲಿ, ಫಾರೂಕ ಅಹ್ಮದ್ ಮಣೂರ, ವಿಶಾಲಾಕ್ಷಿ ಮಾಯನ್ಣವರ್, ಮಲ್ಲಿಕಾರ್ಜುನ ಇಬ್ರಾಹಿಂಪುರ, ಕುಪೇಂದ್ರ ಬರಗಾಲಿ, ಪ್ರಭವ ಪಟ್ಟಣಕರ್, ರೇವಯ್ಯಾ ಸ್ವಾಮಿ, ಭಾಗ್ಯಶ್ರೀ ಮರಗೋಳ, ಕವಿತಾ ಕವಳೆ, ಧರ್ಮಣ್ಣ ಹೆಚ್ ಧನ್ನಿ, ಶಿವರಾಜ ಅಂಡಗಿ, ಶರಣರಾಜ ಚಪ್ಪರಬಂದಿ, ಕಲ್ಯಾಣಕುಮಾರ ಶೀಲವಂತ, ಶಕುಂತಲಾ ಪಾಟೀಲ, ಜ್ಯೋತಿ ಕೋಟನೂರ, ಜಯಶ್ರೀ ಜಮಾದಾರ, ಚನ್ನಮಲ್ಲಯ್ಯ ಹಿರೇಮಠ, ಕಲ್ಯಾಣಕುಮಾರ ಸಂಗಾವಿ, ಮಹಾನಂದಾ ಹುಲಿ, ಎಸ್ ಕೆ ಬಿರಾದಾರ, ನಾಗಪ್ಪ ಸಜ್ಜನ್, ಸಂತೋಷ ಕುಡಳ್ಳಿ, ಸುರೇಶ ದೇಶಪಾಂಡೆ, ಸುರೇಶ ಲೇಂಗಟಿ, ಶರಣಬಸಪ್ಪ ಕೋಬಾಳ, ವೀರಭದ್ರಪ್ಪ ಗುರುಮಿಠಕಲ್, ಎಂ ಎನ್ ಸುಗಂಧಿ, ಶಿವಾನಂದ ಸುರವಸೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಗಮನ ಸೆಳೆದ ಸಾಹಿತ್ಯ ಸಿಂಚನ ಗೋಷ್ಠಿ:

ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಿಂಚನ ಗೋಷ್ಠಿಯಲ್ಲಿ ವಿಮರ್ಶಾ ನೋಟಗಳು-ಸಾಹಿತ್ಯದ ಮೌಲ್ಯಗಳ ಕುರಿತು ಡಾ. ಜಗನ್ನಾಥ ತರನಳ್ಳಿ, ಆಧುನಿಕ ಸಾಹಿತ್ಯಕ್ಕಿರುವ ಸವಾಲುಗಳು-ಪರಿಹಾರೋಪಾಯಗಳು ಕುರಿತು ಡಾ. ಅಪ್ಪಗೆರೆ ಸೋಮಶೇಕರ, ಸಮ್ಮೇಳನಾಧ್ಯಕ್ಷರ ಬದುಕು ಬರಹದ ಕುರಿತು ಡಾ. ಸಂತೋಷಕುಮಾರ ಕಂಬಾರ ಮಾತನಾಡಿದರು.

ವಿಠಲ ಬೀಮನ್, ಲತಾ ದೇಶಪಾಂಡೆ,. ನರಸಿಂಗರಾವ ಹೇಮನೂರ, ಸೈಯ್ಯದ್ ನಝೀರುದ್ದಿನ್ ಮುತ್ತವಲ್ಲಿ, ಸುನೀತ ಮಾಳಗಿ, ಶೇಖ್ ಸಮ್ರೀನ್, ಈರಣ್ಣಾ ಸೋನಾರ, ಕುಶಾಲ ಧರ್ಗಿ ಇತರರು ಉಪಸ್ಥಿತರಿದ್ದರು.

ಕಾವ್ಯ ಕಿರಣ ಎಂಬ ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಲೇಖಕಿ ಡಾ. ಜಯದೇವಿ ಗಾಯಕವಾಡ, ಕಾವ್ಯ ಪರಂಪರೆಗೆ ಅಧ್ಯಯನ ಮುಖ್ಯ. ಆಗ ಮಾತ್ರ ಕಾವ್ಯಕ್ಕೆ ಹೊಸ ಸ್ಪರ್ಶ ಕೊಡಲು ಸಾಧ್ಯ. ಅನುಭವದ ಕೊರತೆಯಿಂದ ಕಾವ್ಯ ಮಿಡಿಯುತ್ತಿಲ್ಲ. ಬದುಕು ಮತ್ತು ಬರಹ ಒಂದಾಗಬೇಕು. ಸಾಹಿತಿಗೆ ವರ್ತಮಾನದ ತಲ್ಲಣಗಳಿಗೆ ಸ್ಪಂದಿಸಬೇಕು ಹಾಗೂ ಸಾಮಾಜಿಕ ಜವಾಬ್ದಾರಿ ಇರಬೇಕಾಗಿದೆ ಎಂದರು.

ಪತ್ರಕರ್ತ-ಸಾಹಿತಿ ಡಾ. ಶಿವರಂಜನ್ ಸತ್ಯಂಪೇಟೆ ಸಮಾರೋಪ ನುಡಿಗಳನ್ನಾಡಿ, ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ಸಾಹಿತ್ಯವನ್ನು ಓದಬೇಕು. ಇಂದಿನ ಯುವಕರಿಗೆ ಸಾಹಿತ್ಯದ ಸಂಗವಿಲ್ಲದಿರುವುದರಿoದ ಮನುಷ್ಯ ಸಂಬoಧಗಳು ಹಾಳಾಗುತ್ತಿವೆ. ಸಾಹಿತ್ಯವೆಂದರೆ ಬರೀ ಮಾತಲ್ಲ. ಅದು ನುಡಿದರೆ ಮುತ್ತಿನ ಹಾರ, ಮಾತೆಂಬುದು ಜ್ಯೋತಿರ್ಲಿಂಗ ಇದ್ದಂತೆ. ಒಂದು ನಾಡಿನ ಶ್ರೇಷ್ಠತೆ ಸಾಹಿತ್ಯದಲ್ಲಿಯೇ ಇದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X