ಕಲಬುರಗಿ: ಶಾಲಾ ಬಸ್ ಗೆ ಟ್ಯಾಂಕರ್ ಢಿಕ್ಕಿ; ಇಬ್ಬರು ಮಕ್ಕಳಿಗೆ ಗಾಯ

ಕಲಬುರಗಿ: ಖಾಸಗಿ ಶಾಲಾ ಬಸ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳವಾರ ಇಲ್ಲಿನ ರಿಂಗ್ ರಸ್ತೆಯ ನಾಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಶಾಲಾ ಮಕ್ಕಳನ್ನ ಕರೆದುಕೊಂಡು ಶಾಲೆಗೆ ಹೋಗುತ್ತಿದ್ದ ಬಸ್ ಗೆ ರಿಂಗ್ ರೋಡ್ ನಿಂದ ಎದುರಿಗೆ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆ ಕಲಬುರಗಿ ಟ್ರಾಫಿಕ್ ಪೊಲೀಸ್ ಠಾಣೆ 1 ರ ವ್ಯಾಪ್ತಿಯಲ್ಲಿ ನಡೆದಿದೆ.
Next Story





