Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶಿಕ್ಷಕರು ವಿದ್ಯಾರ್ಥಿಗಳ...

Kalaburagi | ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು: ಡಾ.ನೀಲಾಂಬಿಕಾ ಶೇರಿಕಾರ

ವಾರ್ತಾಭಾರತಿವಾರ್ತಾಭಾರತಿ12 Sept 2026 7:37 PM IST
share
Kalaburagi | ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು: ಡಾ.ನೀಲಾಂಬಿಕಾ ಶೇರಿಕಾರ

ಕಲಬುರಗಿ: ಶಿಕ್ಷಕ ಎಂದರೆ ಕೇವಲ ಪಾಠ ಹೇಳುವ ಗುರುವಲ್ಲ, ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುವ ಶಿಲ್ಪಿ ಎಂದು ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳ ನಿರ್ದೇಶಕಿ ಡಾ.ನೀಲಾಂಬಿಕಾ ಶೇರಿಕಾರ ಹೇಳಿದರು.

ನಗರದ ಗೋದುತಾಯಿ ಶಿಕ್ಷಣ (ಬಿ.ಎಡ್.) ಮಹಾವಿದ್ಯಾಲಯದಲ್ಲಿ ಎರಡನೇ ಸೆಮಿಸ್ಟರ್ ವಿದ್ಯಾರ್ಥಿನಿಯರು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸಂಸ್ಕಾರ, ನೈತಿಕತೆ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ಹೊಣೆಗಾರಿಕೆ ಹೊಂದಿದ್ದಾರೆ ಎಂದರು.

ವೇದಕಾಲದ ಶಿಕ್ಷಣ ಪದ್ಧತಿ ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯ ನಡುವಿನ ವ್ಯತ್ಯಾಸಗಳನ್ನು ವಿವರಿಸಿದ ಅವರು, ಕಾಲ ಬದಲಾದರೂ ಶಿಕ್ಷಣದ ಮೂಲ ಉದ್ದೇಶ ವ್ಯಕ್ತಿತ್ವ ನಿರ್ಮಾಣವೇ ಆಗಿದೆ ಎಂದು ಹೇಳಿದರು. ಡಾ.ಅಪ್ಪ ಅವರು ಶಿಕ್ಷಕರಿಗೆ ಮಹಾನ್ ಮಾರ್ಗದರ್ಶಕರಾಗಿದ್ದು, ಅವರು ತೋರಿದ ದಾರಿಯಲ್ಲಿ ಅನೇಕ ಶಿಕ್ಷಕರು ರೂಪುಗೊಂಡಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಕಲ್ಪನಾ ಭೀಮಳ್ಳಿ ಮಾತನಾಡಿ, ಉತ್ತಮ ಶಿಕ್ಷಕ ವಿದ್ಯಾರ್ಥಿಗೆ ಕೇವಲ ಪರೀಕ್ಷೆಯಲ್ಲಿ ಅಂಕ ಗಳಿಸುವುದನ್ನಲ್ಲ, ಜೀವನದ ಸವಾಲುಗಳನ್ನು ಎದುರಿಸುವ ಧೈರ್ಯವನ್ನೂ ಕಲಿಸುತ್ತಾನೆ ಎಂದರು.

ಶರಣಬಸವೇಶ್ವರ ಸಂಸ್ಥಾನ ಅನ್ನದಾಸೋಹದ ಜೊತೆಗೆ ಅಕ್ಷರದಾಸೋಹಕ್ಕೂ ಸಮಾನ ಪ್ರಾಮುಖ್ಯತೆ ನೀಡಿ ಈ ಭಾಗವನ್ನು ಶಿಕ್ಷಣದ ಕೇಂದ್ರವನ್ನಾಗಿ ಬೆಳೆಸುವಲ್ಲಿ ಡಾ.ಅಪ್ಪ ಹಾಗೂ ಡಾ.ಅವ್ವ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜವೇರಿಯಾ ಅಂಜುಮಶೇಖ್ ನಿರೂಪಣೆ ಮತ್ತು ವಂದನೆ ಸಲ್ಲಿಸಿದರು. ಪ್ರಿಯಾಂಕಾ ಸ್ವಾಗತಿಸಿದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X