Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕನ್ನಡ ಭಾಷೆಯ ಉಳಿವಿಗೆ...

Kalaburagi | ಕನ್ನಡ ಭಾಷೆಯ ಉಳಿವಿಗೆ ಅಧ್ಯಾಪಕರು ಸಂಘಟಿತರಾಗಿ ಕಾರ್ಯನಿರ್ವಹಿಸಿ: ಪ್ರೊ.ಶಶಿಕಾಂತ ಉಡಿಕೇರಿ

ವಾರ್ತಾಭಾರತಿವಾರ್ತಾಭಾರತಿ29 Sept 2026 4:31 PM IST
share
Kalaburagi | ಕನ್ನಡ ಭಾಷೆಯ ಉಳಿವಿಗೆ ಅಧ್ಯಾಪಕರು ಸಂಘಟಿತರಾಗಿ ಕಾರ್ಯನಿರ್ವಹಿಸಿ: ಪ್ರೊ.ಶಶಿಕಾಂತ ಉಡಿಕೇರಿ

ಕಲಬುರಗಿ: ಕನ್ನಡ ಭಾಷೆಯ ಉಳಿವು ಹಾಗೂ ಪೋಷಣೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು. ಸಂಘಗಳು ಆರ್ಥಿಕವಾಗಿ ಬಲಿಷ್ಠವಾಗಬೇಕಾದರೆ ಅಧ್ಯಾಪಕರು ದೇಣಿಗೆ ಹಾಗೂ ವಂತಿಗೆ ನೀಡುವ ಮೂಲಕ ಸಂಘದ ಚಟುವಟಿಕೆಗಳಿಗೆ ಬೆಂಬಲ ನೀಡಬೇಕು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಉಡಿಕೇರಿ ಹೇಳಿದರು.

ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಆಯೋಜಿಸಿದ್ದ ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆಯ ಪೋಷಣೆ ಹಾಗೂ ಬೆಳವಣಿಗೆಗೆ ಸಂಘ ನಿರಂತರವಾಗಿ ಕೆಲಸ ಮಾಡಬೇಕು. ಬರಹಗಾರರು ಹಾಗೂ ಲೇಖಕರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಸಂಘದ ವತಿಯಿಂದ ವಿವಿಧ ಪ್ರಕಾರದ ಪುಸ್ತಕಗಳನ್ನು ಪ್ರಕಟಿಸುವ ಕಾರ್ಯಕ್ಕೂ ಮುಂದಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವಿಕ್ರಮ ವಿಸಾಜಿ ಮಾತನಾಡಿ, ಕನ್ನಡ ಅಧ್ಯಯನ ಸಂಸ್ಥೆ ಪವಿತ್ರವಾದ ಸ್ಥಳವಾಗಿದೆ. ಅನೇಕ ಸಂಘಗಳು ಹುಟ್ಟಿ ಕೆಲವೇ ದಿನಗಳಲ್ಲಿ ಮರೆಯಾಗುತ್ತವೆ. ಆದರೆ ಕನ್ನಡ ಅಧ್ಯಾಪಕರ ಸಂಘವು ಗಟ್ಟಿಯಾಗಿ ಬೆಳೆದು ಉತ್ತಮ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಹಾಗೂ ಕಲಾ ನಿಕಾಯದ ಡೀನ್ ಪ್ರೊ. ಎಚ್.ಟಿ. ಪೋತೆ ಮಾತನಾಡಿ, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ಕನ್ನಡ ಅಧ್ಯಾಪಕರು ಸಂಘಟಿತರಾಗಬೇಕು. ಅಧ್ಯಾಪಕರಲ್ಲಿ ಪರಸ್ಪರ ಸಹಕಾರ, ಸಹೃದಯತೆ, ಗೌರವ, ಪ್ರೀತಿ ಹಾಗೂ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಡಾ. ಚಿತ್ಕಳಾ ಮಠಪತಿ, ಡಾ. ಅನ್ನಪೂರ್ಣ ಪಾಟೀಲ್, ಡಾ. ಶ್ರೀಶೈಲ್ ನಾಗರಾಳ, ಡಾ. ಸುರೇಂದ್ರ ಕೆರಮಗಿ ಹಾಗೂ ಡಾ. ಅಮೃತಾ ಕಟಕೆ ಅವರನ್ನು ಸನ್ಮಾನಿಸಲಾಯಿತು. ಕುವೆಂಪು ಭಾಷಾ ಭಾರತಿ ಅನುವಾದ ಪ್ರಶಸ್ತಿಗೆ ಭಾಜನರಾದ ಡಾ. ಸೂರ್ಯಕಾಂತ ಸುಜಾತ್ ಹಾಗೂ ಹೊಸದಾಗಿ ಪುಸ್ತಕ ಪ್ರಕಟಿಸಿರುವ ಡಾ. ಮಲ್ಲಿನಾಥ ತಳವಾರ, ಡಾ. ಮಿರಾಜ್ ಪಾಷಾ, ಡಾ. ಸಂಗಣ್ಣ ಸಿಂಗೆ ಮತ್ತು ಡಾ. ದತ್ತಾತ್ರೇಯ ಅವರನ್ನು ಸಹ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಕನ್ನಡ ಅಧ್ಯಾಪಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವೂ ನಡೆಯಿತು.

ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಖಾಜಾವಲಿ ಈಚನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಡಾ. ಪಂಡಿತ ಬಿ.ಕೆ. ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೊ. ಸೂರ್ಯಕಾಂತ ಅತನೂರ ಅವರು ಅಧ್ಯಾಪಕರ ಸಂಘದ ವಿವಿಧ ಬೇಡಿಕೆಗಳ ಪಟ್ಟಿಯನ್ನು ಮಂಡಿಸಿ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಿಗೆ ಸಲ್ಲಿಸಿದರು.

ಬಸವರಾಜ ಶೃಂಗೇರಿ ಪ್ರಾರ್ಥಿಸಿದರು. ಡಾ. ಕಪಿಲ್ ಚಕ್ರವರ್ತಿ ಕಾರ್ಯಕ್ರಮ ನಿರೂಪಿಸಿದರು. ಡಾ. ಶಿವಶರಣಪ್ಪ ಮೋತಕಪಳ್ಳಿ ವಂದಿಸಿದರು.

ಮಹಿಳಾ ಪ್ರತಿನಿಧಿ ಸುವರ್ಣ ವಜ್ಜೆ ಹಾಗೂ ಸಂಘದ ಪದಾಧಿಕಾರಿಗಳಾದ ಡಾ. ಜಗಪ್ಪ ತಳವಾರ, ಡಾ. ಮಲ್ಲಪ್ಪ ಮಾನೇಗಾರ, ಡಾ. ರೇವಣಸಿದ್ಧ ನಿಂಗಾನಾಯ್ಕ, ಡಾ. ರವೀಂದ್ರ ಕುಂಬಾರ್, ಡಾ. ದಯಾನಂದ ಕಾಂಬಳೆ, ಡಾ. ಗುಲಾಮ್ ಮಹೆಬೂಬ್, ಡಾ. ಸಂಗೀತಾ ಹಿರೇಮಠ, ಡಾ. ಮರೆಪ್ಪ ಮೇತ್ರೆ, ಮಾರುತಿ ಮಾರ್ಪಳ್ಳಿ, ಡಾ. ರುಕ್ಮಿಣಿ, ಭೀಮಣ್ಣ ಬೆಡಕಪಳ್ಳಿ ಸೇರಿದಂತೆ ವಿವಿಧ ಕಾಲೇಜುಗಳ ಕನ್ನಡ ಅಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags

KannadaTeachersKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X