Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯಾರ್ಥಿಗಳ ವಿರುದ್ಧ...

Kalaburagi | ವಿದ್ಯಾರ್ಥಿಗಳ ವಿರುದ್ಧ ಹಿಂಸೆಗೆ ಕರೆ ನೀಡಿದ ಟಿ.ಜಿ.ಮೋಹನ್‌ದಾಸ್ ಹೇಳಿಕೆ ಖಂಡನೀಯ: ಪದ್ಮಿನಿ ಕಿರಣಗಿ

ವಾರ್ತಾಭಾರತಿವಾರ್ತಾಭಾರತಿ29 July 2026 8:41 PM IST
share
Kalaburagi | ವಿದ್ಯಾರ್ಥಿಗಳ ವಿರುದ್ಧ ಹಿಂಸೆಗೆ ಕರೆ ನೀಡಿದ ಟಿ.ಜಿ.ಮೋಹನ್‌ದಾಸ್ ಹೇಳಿಕೆ ಖಂಡನೀಯ: ಪದ್ಮಿನಿ ಕಿರಣಗಿ

ಕಲಬುರಗಿ: ಆರೆಸ್ಸೆಸ್‌ ನಾಯಕ ಟಿ.ಜಿ.ಮೋಹನ್‌ದಾಸ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪ್ರಚೋದನಕಾರಿ ಹಾಗೂ ಹಿಂಸೆಗೆ ಪ್ರೇರೇಪಿಸುವ ಹೇಳಿಕೆಗಳನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಎಐಡಿಡಬ್ಲ್ಯೂಎ) ತೀವ್ರವಾಗಿ ಖಂಡಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷೆ ಪದ್ಮಿನಿ ಕಿರಣಗಿ ಅವರು, ಜಂತರ್ ಮಂತರ್ ಸುತ್ತ ಕರ್ಫ್ಯೂ ಜಾರಿಗೊಳಿಸಬೇಕು ಹಾಗೂ ಅಧಿಕಾರ ತಮ್ಮ ಕೈಯಲ್ಲಿದ್ದರೆ ಪ್ರತಿಭಟನೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲುತ್ತಿದ್ದೆ ಎಂಬ ಹೇಳಿಕೆಗಳು ಅತ್ಯಂತ ಖಂಡನೀಯವಾಗಿವೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ಜಾತ್ಯತೀತ ಮನೋಭಾವದ ಯುವತಿಯರ ಕುರಿತು ಅವಹೇಳನಕಾರಿ ಹಾಗೂ ಲೈಂಗಿಕ ಹಿಂಸೆಯನ್ನು ಸಮರ್ಥಿಸುವ ರೀತಿಯ ಹೇಳಿಕೆ ನೀಡಿರುವುದು ಮಹಿಳೆಯರ ಘನತೆಗೆ ಧಕ್ಕೆ ತರುವಂತದ್ದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಹೇಳಿಕೆಗಳು ಕೇವಲ ರಾಜಕೀಯ ಟೀಕೆಗಳಲ್ಲ; ಹಿಂಸೆಗೆ ನೇರ ಪ್ರಚೋದನೆ ನೀಡುವಂತಿದ್ದು, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರನ್ನೇ ದೂಷಿಸುವ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಆರೋಪಿಸಿದ್ದಾರೆ.

ಶಾಂತಿಯುತ ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳ ವಿರುದ್ಧ ಹಿಂಸೆಗೆ ಕರೆ ನೀಡುವುದು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿನ ಮೇಲಿನ ದಾಳಿಯಾಗಿದೆ. ಮಹಿಳೆಯರ ಕುರಿತು ಇಂತಹ ಅವಹೇಳನಕಾರಿ ಅಭಿಪ್ರಾಯಗಳು ಸಮಾಜದಲ್ಲಿ ಮಹಿಳಾ ವಿರೋಧಿ ಮನೋಭಾವವನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಈ ಹೇಳಿಕೆಗಳ ಕುರಿತು ಭಾರತೀಯ ನ್ಯಾಯ ಸಂಹಿತೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಟಿ.ಜಿ. ಮೋಹನ್‌ದಾಸ್ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಐಡಿಡಬ್ಲ್ಯೂಎ ಆಗ್ರಹಿಸಿದೆ.

Tags

studentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X