Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರಾಷ್ಟ್ರೀಯ ಆರ್ಥಿಕತೆಯ...

Kalaburagi | ರಾಷ್ಟ್ರೀಯ ಆರ್ಥಿಕತೆಯ ಬೆಳವಣಿಗೆಯಲ್ಲಿ ಪ್ರವಾಸೋದ್ಯಮದ ಕೊಡುಗೆ ಮಹತ್ವದ್ದು: ಪ್ರೊ.ಆರ್.ಆರ್.ಬಿರಾದಾರ್

ʼವಿಶ್ವ ಪ್ರವಾಸೋದ್ಯಮ ದಿನ–2026ʼ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Sept 2026 5:08 PM IST
share
Kalaburagi | ರಾಷ್ಟ್ರೀಯ ಆರ್ಥಿಕತೆಯ ಬೆಳವಣಿಗೆಯಲ್ಲಿ ಪ್ರವಾಸೋದ್ಯಮದ ಕೊಡುಗೆ ಮಹತ್ವದ್ದು: ಪ್ರೊ.ಆರ್.ಆರ್.ಬಿರಾದಾರ್

ಕಲಬುರಗಿ: ರಾಷ್ಟ್ರೀಯ ಆರ್ಥಿಕತೆಯ ಬೆಳವಣಿಗೆಯಲ್ಲಿ ಪ್ರವಾಸೋದ್ಯಮದ ಕೊಡುಗೆ ಮಹತ್ವದ್ದಾಗಿದೆ. ಪ್ರವಾಸೋದ್ಯಮವು ಆದಾಯ, ಉದ್ಯೋಗ ಹಾಗೂ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವುದರ ಜತೆಗೆ ಆತಿಥ್ಯ, ಸಾರಿಗೆ, ಆಹಾರ ಸೇವೆ, ಕರಕುಶಲ, ಚಿಲ್ಲರೆ ವ್ಯಾಪಾರ ಹಾಗೂ ಮನರಂಜನಾ ಕ್ಷೇತ್ರಗಳ ಅಭಿವೃದ್ಧಿಗೂ ಸಹಕಾರಿಯಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಆರ್.ಆರ್. ಬಿರಾದಾರ್ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗದ ವತಿಯಿಂದ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ, ಶರಣಬಸವ ವಿಶ್ವವಿದ್ಯಾಲಯ, ಏವಿಯೇಷನ್ ಇನ್‌ಸ್ಟಿಟ್ಯೂಟ್ ಆಫ್ ಕರ್ನಾಟಕ, ಇಂಟಾಕ್ ಕಲಬುರಗಿ ಶಾಖೆ ಹಾಗೂ ಕೆಟಿಎಫ್ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನ–2026 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ: ಪ್ರವಾಸೋದ್ಯಮದ ಮರುರೂಪಿಸುವಿಕೆ’ ವಿಷಯದಡಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಮುದಾಯಗಳಿಗೆ ಉದ್ಯೋಗ ಹಾಗೂ ಆರ್ಥಿಕ ಅವಕಾಶಗಳನ್ನು ಕಲ್ಪಿಸುವಲ್ಲಿ ಪ್ರವಾಸೋದ್ಯಮ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೂ ಇದು ಪೂರಕವಾಗಿದೆ ಎಂದು ಹೇಳಿದರು.

ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಬೇಬಿ ಮೊಗ್ರಾ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರವಾಸಿ ತಾಣಗಳ ಆಯ್ಕೆ, ಪ್ರವಾಸ ಯೋಜನೆ, ಬುಕಿಂಗ್, ವೈಯಕ್ತೀಕರಿಸಿದ ಸೇವೆಗಳು ಹಾಗೂ ತಾಣ ನಿರ್ವಹಣೆಯಲ್ಲಿ ಎಐ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಬಹುದಾಗಿದೆ ಎಂದು ವಿವರಿಸಿದರು.

ವ್ಯವಹಾರ ಅಧ್ಯಯನ ನಿಕಾಯದ ಪ್ರೊ. ಪಾಂಡುರಂಗ ವಿ. ಪತ್ತಿ ಮಾತನಾಡಿ, ಭಾರತವು ವೈವಿಧ್ಯಮಯ ಸಾಂಸ್ಕೃತಿಕ, ಐತಿಹಾಸಿಕ, ಆಧ್ಯಾತ್ಮಿಕ ಹಾಗೂ ನೈಸರ್ಗಿಕ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿದೆ. ಇವುಗಳನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ ಎಂದರು.

ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗದ ಮುಖ್ಯಸ್ಥ ಡಾ. ಜಿ. ಮಹೇಂದರ್ ಅವರು ವಿಶ್ವ ಪ್ರವಾಸೋದ್ಯಮ ದಿನದ ಮಹತ್ವ ಹಾಗೂ ಪ್ರವಾಸೋದ್ಯಮದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಪರಿಸರ ಆಯಾಮಗಳ ಕುರಿತು ಮಾತನಾಡಿದರು.

ಸಹಾಯಕ ಪ್ರಾಧ್ಯಾಪಕ ಹಾಗೂ ಕಾರ್ಯಕ್ರಮ ಸಂಯೋಜಕ ಡಾ. ನವೀನ್ ಕುಮಾರ್ ಟಿ.ಜಿ. ಮಾತನಾಡಿದರು.

ಸಹ ಪ್ರಾಧ್ಯಾಪಕ ಡಾ. ಗಣಪತಿ ಸಿನ್ನೂರು, ಇಂಟಾಕ್ ಕಲಬುರಗಿ ಶಾಖೆಯ ಮುಖ್ಯಸ್ಥ ಡಾ. ಶಂಭುಲಿಂಗ ಎಸ್. ವಾಣಿ, ಕಲಬುರಗಿಯ ‘ಟೇಕ್ ಎ ಟ್ರಿಪ್ ಟ್ರಾವೆಲ್ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ಪರಬಸಪ್ಪ ಬಿಜಾಪುರೆ, ಶರಣಬಸವ ವಿಶ್ವವಿದ್ಯಾಲಯದ ಪ್ರವಾಸೋದ್ಯಮ ಅಧ್ಯಯನ ವಿಭಾಗದ ಕಲ್ಯಾಣ್ ರಾವ್ ಹಾಗೂ ಏವಿಯೇಷನ್ ಇನ್‌ಸ್ಟಿಟ್ಯೂಟ್ ಆಫ್ ಕರ್ನಾಟಕದ ಕಲಬುರಗಿ ಶಾಖಾ ವ್ಯವಸ್ಥಾಪಕ ವಾದಿರಾಜ್ ಭಾಗವಹಿಸಿದ್ದರು. ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗದ ಪ್ರೊ. ಅಂಕತಿ ರಘು ಚರ್ಚಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Tags

TourismKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X