Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜಾನಪದ ಸಂಸ್ಕೃತಿ...

ಕಲಬುರಗಿ | ಜಾನಪದ ಸಂಸ್ಕೃತಿ ನಶಿಸುತ್ತಿರುವುದು ದುರಂತ: ಸೋಮಶೇಖರ ಶಿವಾಚಾರ್ಯರು ಕಳವಳ

ವಾರ್ತಾಭಾರತಿವಾರ್ತಾಭಾರತಿ10 April 2025 5:55 PM IST
share
Photo of Program

ಕಲಬುರಗಿ : ಒಂದು ಕಾಲದಲ್ಲಿ ಮನುಷ್ಯ ಜೀವನದ ಶ್ರಮ ಸಂಸ್ಕೃತಿ ಹೆಚ್ಚಿಸಿ ಲವಲವಿಕೆಯ ಜೀವನಕ್ಕೆ ಕಾರಣವಾಗುತ್ತಿದ್ದ ಜಾನಪದ ಸಂಸ್ಕೃತಿ ಇಂದು ನಿಧಾನವಾಗಿ ಮರೆಯಾಗುತ್ತಿರುವುದು ನಾಡಿನ ದುರಂತವಾಗಿದೆ ಎಂದು ಕಂಬಳೇಶ್ವರ ಮಠದ ಸೋಮಶೇಖರ ಶಿವಾಚಾರ್ಯರು ಕಳವಳ ವ್ಯಕ್ತಪಡಿಸಿದರು.

ಚಿತ್ತಾಪುರ ತಾಲೂಕಿನ ಅಳ್ಳೊಳ್ಳಿ ಸಾವಿರ ದೇವರ ಸಂಸ್ಥಾನ ಮಠದ ಸದ್ಗುರು ಶ್ರೀ ಸಿದ್ದಲಿಂಗೇಶ್ವರರ 9ನೇ ವರ್ಷದ ಜಾತ್ರಾ ಪ್ರಯುಕ್ತ 5 ದಿನಗಳ ಕಾಲ ಜರುಗಿದ ಆಧ್ಯಾತ್ಮಿಕ ಕಾರ್ಯಕ್ರಮದ ಸಮಾರೋಪ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಎಲ್ಲರೂ ಒಟ್ಟಿಗೆ ಹಾಡು ಹಾಡುತ್ತಾ, ಕುಣಿಯುತ್ತಾ, ನಲಿಯುತ್ತಾ ಶ್ರಮ ಹಾಕಿ ದುಡಿಯುತ್ತಾ ಸಾಮಾಜಿಕ ಸಂಬಂಧಗಳನ್ನು ಉತ್ತಮ ಪಡಿಸಿಕೊಳ್ಳಲಾಗುತ್ತಿತ್ತು. ಸಂಬಂಧಗಳ ವೃದ್ಧಿಗೆ ಜಾನಪದ ಸಂಸ್ಕೃತಿ ಪ್ರಮುಖ ಕಾರಣವಾಗಿತ್ತು ಎಂದರು.

ಹಾಸ್ಯ ಕಲಾವಿದ ಉಲ್ಲಾಸ ಮಾಗಣಗೇರಿ ಅವರಿಂದ ಹಾಸ್ಯ ರಸಮಂಜರಿ ಜರುಗಿತು.

ಇದೇ ಸಂದರ್ಭದಲ್ಲಿ ವೈದ್ಯರಾದ ಪ್ರಶಾಂತ ಕುಲ್ಕರ್ಣಿ, ಗಿರೀಶ ಪವಾರ ಹಾಗೂ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮಾನವ ಸಂಪನ್ಮೂಲ ನಿರ್ವಹಣಾ ಅಧಿಕಾರಿ ಕೆ ವಿ ವೈ ಎಸ್ ನಾರಾಯಣ ಅವರಿಗೆ ಮಠದ ವತಿಯಿಂದ ನೀಡಲ್ಪಡುವ ಕಾಯಕಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಉದ್ಘಾಟಿಸಿದರು.

ಕಲಕೇರಿ ಮರುಳಸಿದ್ದೇಶ್ವರ ಸಂಸ್ಥಾನ ಮಠದ ಸಿದ್ದರಾಮ ಶಿವಾಚಾರ್ಯ, ದಂಡಗುಂಡ ಸಂಗನಬಸವ ಶಿವಾಚಾರ್ಯ, ತೋನಸನಹಳ್ಳಿ ಚರಂತೇಶ್ವರ ಸಂಸ್ಥಾನ ಮಠದ ರೇವಣಸಿದ್ಧ ಶಿವಾಚಾರ್ಯ, ಹಲಕರ್ಟಿ ಸಿದ್ದೇಶ್ವರ ಹಿರೇಮಠದ ರಾಜಶೇಖರ ಶಿವಾಚಾರ್ಯ, ಸೇಡಂನ ಹಾಲಪ್ಪಯ್ಯ ವಿರಕ್ತಮಠದ ಪಂಚಾಕ್ಷರಿ ಮಹಾಸ್ವಾಮಿ, ಬೆನಕನಹಳ್ಳಿ ವಿರಕ್ತ ಮಠದ ಕೇದಾರಲಿಂಗ ಸ್ವಾಮಿ, ಡೊಂಣ್ಣೂರು ಸಾರಂಗಧರೇಶ್ವರ ಸಂಸ್ಥಾನ ಮಠದ ಪ್ರಶಾಂತ ದೇವರು, ಬೊಮ್ಮನಳ್ಳಿ ಚಂದ್ರಶೇಖರ ಶಿವಾಚಾರ್ಯ ಮುಖಂಡರಾದ ರಾಜುಗೌಡ ಮಾಲಿಪಾಟೀಲ, ಸಂಗಣ್ಣಗೌಡ ಅನ್ವರ, ಸೋಮಶೇಖರಗೌಡ ಮುಸೇನಿ, ವೀರಾರೆಡ್ಡಿ ಮುಸೇನಿ, ಮಹದೇವಪ್ಪ ಡೋಣಗಾಂವ, ರವಿಕುಮಾರ ಪಡ್ಲಾ, ಶ್ರೀಶೈಲ ಗುತ್ತೇದಾರ, ಶಿವಣ್ಣ ಹೂಗಾರ, ದೇವಿಂದ್ರಪ್ಪ ಹಾದಿಮನಿ, ಶಾಂತಕುಮಾರ ಎಣ್ಣಿ, ಈರಣ್ಣ ಮಲ್ಕಂಡಿ, ತಿಪ್ಪರೆಡ್ಡಿಗೌಡ ಗೌನಳ್ಳಿ, ಅಡಿವೆಪ್ಪ ಬಳಬಾ, ದೇವಪ್ಪ ಪೋಟಿ, ಹಣಮಂತ ಬಳಬಾ, ರಾಜಶೇಖರ ಡೋಣಗಾಂವ, ಮಂಜುಗೌಡ, ಮರೆಪ್ಪ ದಂಡಗುಂಡ ಮಹೇಂದ್ರಗೌಡ ಗುತ್ತೇದಾರ ಯಾದಗಿರಿ ಹಾಗೂ ರಾಮರಾವ ಕುಲಕರ್ಣಿ ಪರಿವಾರ ಹಾಗೂ ಇನ್ನಿತರರು ವೇದಿಕೆ ಮೇಲಿದ್ದರು. ಶಾಂತಣ್ಣ ಚಾಳಿಕಾರ ನಿರೂಪಿಸಿದರು. ಶಾಂತಕುಮಾರ ಎಣ್ಣಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X