Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶಿಕ್ಷಣ ಇಲಾಖೆಯ...

Kalaburagi | ಶಿಕ್ಷಣ ಇಲಾಖೆಯ ಗೊಂದಲಕಾರಿ ನೀತಿಗಳ ವಿರುದ್ಧ ಬೇಸತ್ತು ಕಾಂಗ್ರೆಸ್‌ಗೆ ತಿಮ್ಮಯ್ಯ ಪುರ್ಲೆ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ6 Oct 2026 10:22 PM IST
share
Kalaburagi | ಶಿಕ್ಷಣ ಇಲಾಖೆಯ ಗೊಂದಲಕಾರಿ ನೀತಿಗಳ ವಿರುದ್ಧ ಬೇಸತ್ತು ಕಾಂಗ್ರೆಸ್‌ಗೆ ತಿಮ್ಮಯ್ಯ ಪುರ್ಲೆ ರಾಜೀನಾಮೆ

ಕಲಬುರಗಿ: ಶಿಕ್ಷಣ ಇಲಾಖೆಯಲ್ಲಿನ ಗೊಂದಲಕಾರಿ ನೀತಿಗಳು ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದ ಬೇಸತ್ತು ಕೆಪಿಸಿಸಿ ಶಿಕ್ಷಕರ ಘಟಕದ ರಾಜ್ಯ ಸಂಚಾಲಕ ತಿಮ್ಮಯ್ಯ ಪುರ್ಲೆ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಹೇಳಿದರು.

ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಸ್ಪಷ್ಟ ಶಿಕ್ಷಣ ನೀತಿ ಜಾರಿಯಾಗದಿರುವುದು, 9 ಮತ್ತು 10ನೇ ತರಗತಿಗಳಿಗೆ ಪಿಯು ಉಪನ್ಯಾಸಕರಿಂದ ಬೋಧನೆ ಮಾಡಿಸುವ ಆದೇಶ, ಬಡ್ತಿ ಪಡೆದ ಶಿಕ್ಷಕರಿಗೆ ಮತ್ತೆ ಬೋಧನಾ ಜವಾಬ್ದಾರಿ ನೀಡಿರುವುದು, ಸಿಎಸ್‌ಆರ್‌ ನಿಧಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಡೆಸುವ ಕ್ರಮ ಹಾಗೂ ಪರೀಕ್ಷಾ ಪದ್ಧತಿಯಲ್ಲಿ ಪದೇಪದೇ ಬದಲಾವಣೆ ಮಾಡುತ್ತಿರುವುದು ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಆರೋಪಿಸಿದರು.

ಈ ಸಮಸ್ಯೆಗಳನ್ನು ಹಲವು ಬಾರಿ ಶಿಕ್ಷಣ ಸಚಿವರ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ತಿಮ್ಮಯ್ಯ ಪುರ್ಲೆ ತಿಳಿಸಿದರು.

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ತಾವು ಬೇರೆ ಯಾವುದೇ ಪಕ್ಷಕ್ಕೂ ಸೇರ್ಪಡೆಯಾಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Tags

EducationCongressKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X