ಕಲಬುರಗಿ | ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ : ಎಸ್ಪಿ ಅಡ್ಡೂರು ಶ್ರೀನಿವಾಸಲು
ʼʼಬಂಧಿತರಿಂದ 29 ಬೈಕ್ ಜಪ್ತಿʼʼ

ಕಲಬುರಗಿ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಚಿಂಚೋಳಿ ಪೊಲೀಸರು ಯಶಸ್ವಿಯಾಗಿದ್ದು, ಅವರಿಂದ 29 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.
ನಗರದ ಪೋಲಿಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆನಕಿಪಳ್ಳಿಯ ಶ್ರೀಕಾಂತ್ ಗಣಪತಿ (27), ಚಿಂಚೋಳಿಯ ಬಸಯ್ಯ ರಾಚಯ್ಯ ಸ್ವಾಮಿ (44) ಹಾಗೂ ಆರ್.ಜಿ.ನಗರದ ಅಭಿನಂದನ ಜೈಭಾರತ ಮಾನೆ ಎಂಬಾತರನ್ನು ವಶಕ್ಕೆ ಪಡೆದು ಅವರಿದ 5.41 ಲಕ್ಷ ರೂ. ಮೌಲ್ಯದ ಒಟ್ಟು 29 ಹಿರೋ ಹೊಂಡಾ ಸ್ಪ್ಲೆಂಡರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಪ್ರಕರಣದ ತನಿಖೆ ಕಾರ್ಯದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ, ಉಪ ಅಧೀಕ್ಷಕ ಚಿಂಚೋಳಿಯ ಸಂಗಮನಾಥ ಹಿರೇಮಠ, ಸಿಪಿಐ ಕಪಿಲ್ ದೇವ್ ಮಾರ್ಗದರ್ಶನದಲ್ಲಿ, ಪಿಎಸ್ಐ ಗಂಗಮ್ಮ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ರಚಿಸಿ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು.
Next Story







