ಕಲಬುರಗಿ | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದಿನಾಂಕ ವಿಸ್ತರಣೆ

ಸಾಂದರ್ಭಿಕ ಚಿತ್ರ
ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ. ನಾಗರೀಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರಿ, ಗ್ರೂಫ್-ಸಿ, ಆರ್ ಆರ್ ಬಿ ಮತ್ತು ಎಸ್ಎಸ್ಸಿ (RRB & SSC) ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳಿಗೆ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಸೆ.6 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅಭ್ಯರ್ಥಿಗಳ ಕೋರಿಕೆ ಮೇರೆಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳು ಸೇವಾಸಿಂಧು https:/sevasindhu.karnataka.gov.in ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ 2025ರ ಸೆನ6 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ನಂತರ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ನಿಗದಿತ ದಿನಾಂಕದೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ https://dom.karnataka.gov.in ವೆಬ್ಸೈಟ್ ಅನ್ನು ಸಂಪರ್ಕಿಸಲು ಕೋರಲಾಗಿದೆ.







