Kalaburagi | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ನೋಂದಣಿಗೆ ಸೂಚನೆ

ಸಾಂದರ್ಭಿಕ ಚಿತ್ರ
ಕಲಬುರಗಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿಂಗ್, ಎಸ್ಎಸ್ಸಿ ಹಾಗೂ ಆರ್ಆರ್ಬಿ ಹುದ್ದೆಗಳ ನೇಮಕಾತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು 2026ರ ಅಕ್ಟೋಬರ್ 31ರೊಳಗೆ ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




