ಕಲಬುರಗಿ | ನೂತನ ಗ್ರಾಮ ಆಡಳಿತಾಧಿಕಾರಿಗಳಿಗೆ ತರಬೇತಿ

ಕಲಬುರಗಿ : ಕಲಬುರಗಿ ಜಿಲ್ಲೆಗೆ ಹೊಸದಾಗಿ ನೇಮಕವಾದ 60 ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಶುಕ್ರವಾರ ಇಲ್ಲಿನ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಕಂದಾಯ ಇಲಾಖೆಯಲ್ಲಿ ಸೇವೆಗಳನ್ನು ಸಾರ್ವಜನಿಕರಿಗೆ ಹೇಗೆ ತಲುಪಿಸಬೇಕು ಎಂದು ತಿಳಿಸುತ್ತಾ ಕರ್ತವ್ಯ ನಿಷ್ಠೆ ಮೆರೆಯುವಂತೆ ನೌಕರರಿಗೆ ತಿಳಿಸಿದರು.
ಸಹಾಯಕ ಆಯುಕ್ತೆ ಸಾಹಿತ್ಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ರಾಮಚಂದ್ರ ಗಡದ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಶಿವಪ್ರಭು ಹಿರೇಮಠ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Next Story





