Kalaburagi | ನಿರ್ಗಮಿತ ಡಿಸಿ ಬಿ.ಫೌಝಿಯಾ ತರನ್ನುಮ್ ಗೆ ಸನ್ಮಾನ

ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿಗಳ ವತಿಯಿಂದ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಯಿತು.
ಸಮಾರಂಭದಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎ. ಖಯೂಮ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಧರ್ ಹಾಗೂ ಸಹಾಯಕ ಎಂಜಿನಿಯರ್‌ಗಳಾದ ಶಶಿಕಾಂತ್ ಮತ್ತು ಅನಿಲ್ ಅವರು ಡಿಸಿ ಬಿ. ಫೌಝಿಯಾ ತರನ್ನುಮ್ ಅವರಿಗೆ ಭಾವಚಿತ್ರ ನೀಡಿ ಸನ್ಮಾನಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು, ಫೌಝಿಯಾ ತರನ್ನುಮ್ ಅವರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು.
Next Story




