Kalaburagi | ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು

ಸಾಂದರ್ಭಿಕ ಚಿತ್ರ
ಕಲಬುರಗಿ : ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೃತರನ್ನು ನಾಗೂರು ಗ್ರಾಮದ ಲಕ್ಷ್ಮೀ ಗುತ್ತೇದಾರ್ (45) ಹಾಗೂ ಸೈಜಾದ್ ಬಿ. (60) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಮರದ ಕೆಳಗೆ ಕುಳಿತು ಊಟ ಮಾಡುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಮಲಾಪುರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತರ ಕುಟುಂಬಗಳಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದ್ದಾರೆ.
Next Story




