ಕಲಬುರಗಿ| ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಹಣಮಂತ ಬಸವರಾಜ ಮೊಸಂಡಿ
ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಫರಹತಾಬಾದ್ ವ್ಯಾಪ್ತಿಯ ಕವಲಗಾ(ಬಿ) ಗ್ರಾಮದಲ್ಲಿ ನಡೆದಿದೆ.
ಕವಲಗಾ(ಬಿ) ನಿವಾಸಿ ಹಣಮಂತ ಬಸವರಾಜ ಮೊಸಂಡಿ(35) ಆತ್ಮಹತ್ಯೆ ಮಾಡಿಕೊಂಡಿರುವ ರೈತ ಎಂದು ತಿಳಿದುಬಂದಿದೆ.
3 ಎಕರೆ ಜಮೀನು ಹೊಂದಿರುವ ರೈತ ಹಣಮಂತ, ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ 2 ಲಕ್ಷ ರೂ. ಸಾಲ ಹಾಗೂ ಕೃಷಿಗಾಗಿ ಖಾಸಗಿ ಸಾಲ ಮಾಡಿಕೊಂಡಿದ್ದರು. ಧಾರಾಕಾರ ಸುರಿದ ಮಳೆಯಿಂದಾಗಿಬೆಳೆದಿದ್ದ ಹತ್ತಿ, ತೊಗರಿ ಬೆಳೆ ನಾಶವಾಗಿದೆ ಎನ್ನಲಾಗಿದೆ.
ಇದರಿಂದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





