ಕಲಬುರಗಿ | ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

ಕಲಬುರಗಿ: ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಳಂದ ತಾಲೂಕಿನ ಬೆಣ್ಣೆಶಿರೂರು ಗ್ರಾಮದಲ್ಲಿ ನಡೆದಿದೆ.
ಆಳಂದ ತಾಲೂಕಿನ ಬೆಣ್ಣೆಶಿರೂರು ಗ್ರಾಮದ ನಿವಾಸಿ ಯಲ್ಲಾಲಿಂಗ ಬಂಡಗಾರ (19) ಆತ್ಮಹತ್ಯೆ ಮಾಡಿಕೊಂಡವರು.
ಯಲ್ಲಾಲಿಂಗ ಬಂಡಗಾರ ಕೃಷಿ ಚಟುವಟಿಕೆಗಳಿಗಾಗಿ ಸಮೀಪದ ಮಾಡ್ಯಾಳ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿಂದ 1.35 ಲಕ್ಷ ಸಾಲ ಪಡೆದುಕೊಂಡಿದ್ದರು. ಇದಲ್ಲದೆ ಖಾಸಗಿಯಾಗಿ 5 ಲಕ್ಷಕ್ಕೂ ಹೆಚ್ಚು ಸಾಲ ಹೊಂದಿದ್ದನು. ಸಾಲದಾತರು ಹಣ ನೀಡುವಂತೆ ಬೆನ್ನುಬಿದ್ದಿರುವುದರಿಂದ ಮಾನಸಿಕವಾಗಿ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ನಿಂಬರ್ಗಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story




