Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕನಕದಾಸರ ಬಹುಮುಖ...

Kalaburagi | ಕನಕದಾಸರ ಬಹುಮುಖ ವ್ಯಕ್ತಿತ್ವ ಅರಿಯುವುದು ಇಂದಿನ ಅಗತ್ಯ: ಡಾ.ಶಿವರಂಜನ ಸತ್ಯಂಪೇಟೆ

ವಾರ್ತಾಭಾರತಿವಾರ್ತಾಭಾರತಿ5 Aug 2026 6:40 PM IST
share
Kalaburagi | ಕನಕದಾಸರ ಬಹುಮುಖ ವ್ಯಕ್ತಿತ್ವ ಅರಿಯುವುದು ಇಂದಿನ ಅಗತ್ಯ: ಡಾ.ಶಿವರಂಜನ ಸತ್ಯಂಪೇಟೆ

ಕಲಬುರಗಿ : ಕನಕದಾಸರನ್ನು ಕೇವಲ ಭಕ್ತ ಕವಿ ಅಥವಾ ದಾರ್ಶನಿಕರಾಗಿ ಮಾತ್ರವಲ್ಲದೆ, ಅವರ ವ್ಯಕ್ತಿತ್ವದ ವಿವಿಧ ಆಯಾಮಗಳನ್ನು ಗುರುತಿಸಿ ಅರ್ಥೈಸಿಕೊಳ್ಳುವುದು ಇಂದಿನ ಸಮಾಜಕ್ಕೆ ಅತ್ಯಗತ್ಯ ಎಂದು ಪತ್ರಕರ್ತ ಹಾಗೂ ಲೇಖಕ ಡಾ. ಶಿವರಂಜನ ಸತ್ಯಂಪೇಟೆ ಹೇಳಿದರು.

ನಗರದ ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸಗರದ ಕಲಾನಿಕೇತನ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ “ಕನ್ನಡದ ಸಂತಕವಿ ಕನಕದಾಸ” ಕುರಿತ ಕನಕ ದರ್ಶನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮುಖ್ಯ ಉಪನ್ಯಾಸ ನೀಡಿದರು.

ಪಾಳೆಗಾರನ ಮನೆಯಲ್ಲಿ ಜನಿಸಿದ ಕನಕ ನಾಯಕನು ಕನಕದಾಸನಾಗಿ ರೂಪುಗೊಂಡ ಬದುಕಿನ ಪಯಣವು ಕೇವಲ ಭಕ್ತಿ ಮತ್ತು ತತ್ವಚಿಂತನೆಗೆ ಸೀಮಿತವಾಗಿರಲಿಲ್ಲ. ಸಮಾಜದಲ್ಲಿದ್ದ ಅಸಮಾನತೆ, ಜಾತಿ-ಪಂಗಡದ ಭೇದಭಾವ ಹಾಗೂ ಮೂಢನಂಬಿಕೆಗಳ ವಿರುದ್ಧ ಧ್ವನಿ ಎತ್ತಿದ ಅವರು ಸಮಾಜ ಸುಧಾರಕರಾಗಿಯೂ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವ ಮುಖಂಡ ತಿರುಪತಿ ಹತ್ತಿಕಟಗಿ ಮಾತನಾಡಿ, ಸಮಾಜಕ್ಕೆ ಅಂಟಿಕೊಂಡಿರುವ ಮೂಢ ಸಂಪ್ರದಾಯಗಳ ವಿರುದ್ಧ ಕನಕದಾಸರು ನಿರಂತರವಾಗಿ ಹೋರಾಡಿದರು. ಅನೇಕ ಕಷ್ಟ-ನೋವುಗಳನ್ನು ಎದುರಿಸಿದರೂ ತಮ್ಮ ತತ್ವ, ಜ್ಞಾನ ಹಾಗೂ ಸಾಹಿತ್ಯದ ಮೂಲಕ ನಾಡಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಚಿಂತನೆಗಳ ಆಳವನ್ನು ಯುವಜನತೆ ಮತ್ತು ವಿದ್ಯಾರ್ಥಿಗಳು ಅರಿತುಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದ ಕಾರ್ಯದರ್ಶಿ ಜಗನ್ನಾಥ್ ನಾಗೂರ ಅಧ್ಯಕ್ಷತೆ ವಹಿಸಿದ್ದರು.

ಪ್ರಜ್ಞಾ ಸೇವಾ ಸಂಸ್ಥೆಯ ಅಧ್ಯಕ್ಷ ಕಾಶಿನಾಥ್ ಮರತೂರ, ಸಮಾಜಸೇವಕ ಹಾಗೂ ವಕೀಲ ಹಣಮಂತರಾವ ಅಟ್ಟೂರ, ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ, ಸಗರದ ಕಲಾನಿಕೇತನ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಸಂದೀಪ್ ದೇಸಾಯಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಶಿಣ್ಣೂರ ಪ್ರಸ್ತಾವಿಕವಾಗಿ ಮಾತನಾಡಿದರು. ಅಂಬಿಕಾ ಪಾಟ್ನಾ ಕಾರ್ಯಕ್ರಮ ನಿರೂಪಿಸಿದರು. ನಾಗರಾಜ್ ಪಟ್ಟಣಕರ ಸ್ವಾಗತಿಸಿದರು. ಡಿ.ಪಿ. ಸಜ್ಜನ್ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X