Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶಿಕ್ಷಣ ಕ್ಷೇತ್ರದ...

Kalaburagi | ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಅನುದಾನ ಬಳಸಿ: ಮಿನಾಕ್ಷಿ ಬಾಳಿ

ಎಸ್‌ಎಫ್‌ಐ ಜಿಲ್ಲಾ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ8 Oct 2026 6:43 PM IST
share
Kalaburagi | ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಅನುದಾನ ಬಳಸಿ: ಮಿನಾಕ್ಷಿ ಬಾಳಿ

ಕಲಬುರಗಿ: ಕೆಕೆಆರ್‌ಡಿಬಿ ಅನುದಾನವನ್ನು ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಬೇಕು. ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸುವುದು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಒದಗಿಸುವುದು ಸೇರಿದಂತೆ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಈ ಅನುದಾನವನ್ನು ಬಳಸಬೇಕು ಎಂದು ಪ್ರಗತಿಪರ ಚಿಂತಕಿ ಮಿನಾಕ್ಷಿ ಬಾಳಿ ಒತ್ತಾಯಿಸಿದರು.

ನಗರದ ಕನ್ನಡ ಭವನದಲ್ಲಿ ಸರ್ಕಾರಿ ಶಾಲೆಗಳ ಉಳಿವು, ಸರ್ಕಾರಿ ಹಾಸ್ಟೆಲ್‌ಗಳ ಬಲವರ್ಧನೆ, 371(ಜೆ) ಕಲಂ ಸಮರ್ಪಕ ಜಾರಿ ಹಾಗೂ ಜಿಲ್ಲೆಯ ಸಮಗ್ರ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಎಸ್‌ಎಫ್‌ಐ ಜಿಲ್ಲಾ ಸಮ್ಮೇಳನ ನಡೆಯಿತು. ಸಮ್ಮೇಳನಕ್ಕೂ ಮುನ್ನ ಎಸ್‌ಎಫ್‌ಐ ಶ್ವೇತ ಪತಾಕೆ ಹಾರಿಸಲಾಯಿತು.

ಸಸಿಗೆ ನೀರುಣಿಸುವ ಮೂಲಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಮಿನಾಕ್ಷಿ ಬಾಳಿ, ಶಿಕ್ಷಣವು ಪ್ರತಿಯೊಬ್ಬರ ಬದುಕನ್ನು ಬದಲಿಸುವ ಪ್ರಮುಖ ಅಸ್ತ್ರವಾಗಿದೆ. ಇಂದಿಗೂ ತಳ ಸಮುದಾಯದ ಅನೇಕ ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಮಹಿಳೆಯರಿಗೆ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಖ್ ಅವರು ನಡೆಸಿದ ಹೋರಾಟಗಳು ಸ್ಫೂರ್ತಿದಾಯಕವಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಶಿಕ್ಷಣ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಖಾತ್ರಿಪಡಿಸಿದ್ದಾರೆ ಎಂದು ಹೇಳಿದರು.

ಭಗತ್‌ಸಿಂಗ್ ಸೇರಿದಂತೆ ಕ್ರಾಂತಿಕಾರಿಗಳು ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಅವರ ಸ್ಫೂರ್ತಿಯಿಂದ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು. ಅನ್ಯಾಯ ಎಲ್ಲಿ ನಡೆದರೂ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಎಸ್‌ಎಫ್‌ಐ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಕಲಬುರಗಿ ಜಿಲ್ಲೆಯಲ್ಲಿ ಕೆಕೆಆರ್‌ಡಿಬಿಯಿಂದ ಬರುವ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಬಳಕೆಯಾಗುತ್ತಿದ್ದರೂ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಿರುವ ರೀತಿಯಲ್ಲಿ ವಿನಿಯೋಗವಾಗುತ್ತಿಲ್ಲ. ಆದ್ದರಿಂದ ಶಾಲೆಗಳನ್ನು ಬಲಪಡಿಸಲು, ಶಿಕ್ಷಕರ ಕೊರತೆ ನೀಗಿಸಲು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕೆಕೆಆರ್‌ಡಿಬಿ ಅನುದಾನವನ್ನು ಬಳಸಬೇಕು ಎಂದು ಆಗ್ರಹಿಸಿದರು.

ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಗಣೇಶ್ ರಾಥೋಡ್ ಹಾಗೂ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಸರ್ವೇಶ್ ಮಾವಿನಕರ್ ಮಾತನಾಡಿದರು. ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸುಜಾತ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಸಮಿತಿ ಸದಸ್ಯ ಇಮಾಮ್ ಸಾಬ್ ಕಾರ್ಯಕ್ರಮ ನಿರೂಪಿಸಿದರು.

ಅಖಿಲ ಭಾರತ ವಕೀಲರ ಒಕ್ಕೂಟದ ಮುಖಂಡ ಚಂದ್ರಕಾಂತ್, ಶ್ರೀನಿವಾಸ್, ವಿಠೋಬ ಜಾದವ್, ಪ್ರದೀಪ್, ಬೃಂದಾ, ಮಂಜು, ಅಂಕಿತ, ಅಕ್ಷರ, ತುಶಿತ್ ಸೇರಿದಂತೆ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Meenakshi BaliKKRDBKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X