Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಚನಗಳು ಬದುಕಿನ ಜೀವಾಳ :...

Kalaburagi | ವಚನಗಳು ಬದುಕಿನ ಜೀವಾಳ : ಡಾ.ಸಿದ್ಧು ಪಾಟೀಲ

ವಾರ್ತಾಭಾರತಿವಾರ್ತಾಭಾರತಿ29 Aug 2026 6:00 PM IST
share
Kalaburagi | ವಚನಗಳು ಬದುಕಿನ ಜೀವಾಳ : ಡಾ.ಸಿದ್ಧು ಪಾಟೀಲ

ಕಲಬುರಗಿ: ಆ.30ರಂದು ನಡೆಯಲಿರುವ ವಚನ ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಿರಿಯ ಚಿತ್ರಕಲಾವಿದ ಡಾ. ಎ.ಎಸ್. ಪಾಟೀಲ ಅವರ ಸಾರಥ್ಯದ ಶರಣ ಸಂಸ್ಕೃತಿ ದೃಶ್ಯಕಲಾ ಸಂಗ್ರಹಾಲಯ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಬಸವಾದಿ ಶರಣರ ವಚನಗಳನ್ನು ಆಧರಿಸಿದ ಚಿತ್ರಕಲಾ ಪ್ರದರ್ಶನ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ನಡೆಯಿತು.

ವಚನಗಳ ಆಶಯಗಳನ್ನು ಕುಂಚದ ಮೂಲಕ ಬಣ್ಣಗಳ ರೂಪದಲ್ಲಿ ಕಟ್ಟಿಕೊಟ್ಟಿರುವ ಚಿತ್ರಗಳು ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದ್ದವು. ವಚನಗಳಲ್ಲಿನ ಸಮಾನತೆ, ಮಾನವೀಯತೆ, ಪ್ರೀತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶಗಳನ್ನು ಚಿತ್ರಗಳ ಮೂಲಕ ಪರಿಣಾಮಕಾರಿಯಾಗಿ ಬಿಂಬಿಸಲಾಗಿತ್ತು.

ಪ್ರದರ್ಶನಕ್ಕೆ ಚಾಲನೆ ನೀಡಿದ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಸಿದ್ದು ಪಾಟೀಲ ಮಾತನಾಡಿ, ಜಾತಿ, ಮತ, ಲಿಂಗದ ಬೇಧವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವುದನ್ನು ವಚನಗಳು ಕಲಿಸುತ್ತವೆ. ‘ಇವನಾರವ ಇವನಾರವ ಎನ್ನದೆ, ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯ’ ಎಂಬ ವಚನ ಇಂದಿನ ಸಮಾಜದಲ್ಲಿ ಪ್ರೀತಿ ಹಾಗೂ ಸಾಮರಸ್ಯವನ್ನು ಬೆಳೆಸುವ ಸಂದೇಶವನ್ನು ಸಾರುತ್ತದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಬಸವಾದಿ ಶರಣರ ವಚನಗಳು ಕನ್ನಡದ ನಿಜವಾದ ಅಸ್ಮಿತೆಗಳಾಗಿವೆ. ಅವು ನಮ್ಮ ಬದುಕನ್ನು ಮತ್ತಷ್ಟು ಅರ್ಥಪೂರ್ಣವಾಗಿ ಕಟ್ಟಿಕೊಳ್ಳಲು ನೆರವಾಗುವ ಮಾರ್ಗಸೂಚಿಗಳಾಗಿವೆ. ಆಧುನಿಕ ಸಂದರ್ಭದಲ್ಲಿಯೂ ಅನೇಕ ಲೇಖಕರು ವಚನಗಳ ಮಾದರಿಯನ್ನು ಅನುಸರಿಸಿ ಅತ್ಯಮೂಲ್ಯ ಸಾಹಿತ್ಯ ರಚಿಸಿದ್ದಾರೆ. ವಚನಗಳು ಆದರ್ಶ ಬದುಕಿಗೆ ಪೂರಕವಾಗಿವೆ ಎಂದರು.

ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ ಮಾತನಾಡಿ, ಶರಣರ ವಚನಗಳು ಬದುಕಿನ ಸತ್ಯಗಳನ್ನು ಎತ್ತಿಹಿಡಿಯುತ್ತವೆ. ವಚನಗಳು ಕೇವಲ ಕಾವ್ಯವಲ್ಲ, ಮನುಷ್ಯ ತನ್ನ ಬದುಕನ್ನು ಹೇಗೆ ಕಟ್ಟಿಕೊಳ್ಳಬೇಕು ಎಂಬುದನ್ನು ತಿಳಿಸುವ ಜೀವನ ಸಂದೇಶಗಳಾಗಿವೆ. ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶರಣ ಸಾಹಿತ್ಯ ಪರಿಷತ್ ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂದರು.

ಸ್ವಾಗತ ಸಮಿತಿ ಗೌರವಾಧ್ಯಕ್ಷ ಡಾ. ಗಣಪತಿ ಸಿಂಧೆ, ರೈತಪರ ಹೋರಾಟಗಾರ ದಯಾನಂದ ಪಾಟೀಲ ಕಮಲಾನಗರ, ವಚನಪ್ರಿಯ ಜಗದೀಶ ಮರಪಳ್ಳಿ, ಮಹಿಳಾಪರ ಸಂಘಟಕಿ ಸರೋಜಿನಿ ಎಸ್ ಮಯೂರ, ಕಲಾ ಸೌಧ ಸಂಚಾಲಕ ಡಾ. ರೆಹಮಾನ್ ಪಟೇಲ್, ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಂ. ಪಾಟೀಲ ಕಲ್ಲೂರ, ಹಿರಿಯ ಚಿತ್ರಕಲಾವಿದ ಡಾ. ಎ.ಎಸ್. ಪಾಟೀಲ, ಕಸಾಪ ಜಿಲ್ಲಾ ಕಾರ್ಯದರ್ಶಿ ಶಿವರಾಜ ಅಂಡಗಿ, ಜಯಶ್ರೀ ಜಮಾದಾರ ಮಾತನಾಡಿದರು. ಶಿವಲೀಲಾ ಕಲಗುರ್ಕಿ, ರಾಜೇಂದ್ರ ಮಾಡಬೂಳ, ಸೋಮಶೇಖರಯ್ಯ ಹೊಸಮಠ, ರೇವಣಸಿದ್ಧ ಹೊಟ್ಟಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X