Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಾಮಾಯಣ ಮೂಲಕ ಜೀವನದ ಮೌಲ್ಯ...

ಕಲಬುರಗಿ | ರಾಮಾಯಣ ಮೂಲಕ ಜೀವನದ ಮೌಲ್ಯ ತಿಳಿಸಿಕೊಟ್ಟವರು ವಾಲ್ಮೀಕಿ : ಶಾಸಕ ಅಲ್ಲಮಪ್ರಭು ಪಾಟೀಲ

ವಾರ್ತಾಭಾರತಿವಾರ್ತಾಭಾರತಿ7 Oct 2025 9:37 PM IST
share
ಕಲಬುರಗಿ | ರಾಮಾಯಣ ಮೂಲಕ ಜೀವನದ ಮೌಲ್ಯ ತಿಳಿಸಿಕೊಟ್ಟವರು ವಾಲ್ಮೀಕಿ : ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಇಡೀ‌ ವಿಶ್ವಕ್ಕೆ "ರಾಮಾಯಣ" ಮಹಾಕಾವ್ಯದ ಮೂಲಕ ಭರತ‌ ಖಂಡದ ಸಂಸ್ಕೃತಿ,‌ ಸಂಸ್ಕಾರ, ಮಾನವೀಯ ಮೌಲ್ಯವನ್ನು ತಿಳಿಸಿಕೊಟ್ಟ ಮೊದಲ ಮಹಾ ಕವಿ ವಾಲ್ಮೀಕಿಯವರಾಗಿದ್ದಾರೆ‌ ಎಂದು ಶಾಸಕ ‌ಅಲ್ಲಮಪ್ರಭು ಪಾಟೀಲ್‌ ಹೇಳಿದರು.

ಮಂಗಳವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ್‌ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,‌ ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ರಾಮಾಯಣದ ರಚನೆಕಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ‌ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ಅವರ ರಾಮಾಯಣ‌ ಮಹಾಕಾವ್ಯ ದೇಶದ ಸಾಹಿತ್ಯಕ್ಕೆ ಅತ್ಯುನ್ನತ ಕೊಡುಗೆಯಾಗಿದೆ. ರಾಜ ನೀತಿ, ರಾಜ ಧರ್ಮ, ಮಾನವೀಯ ಮೌಲ್ಯ, ಸಂಸ್ಕಾರ, ಸಂಸ್ಕೃತಿ ಕುರಿತು ಹಾಗೂ ಮಾನವರೆಲ್ಲರು ಒಂದೇ ಎಂಬ ಸಂದೇಶ‌ ನೀಡಿದ ವಾಲ್ಮೀಕಿಯವರ ತತ್ವದಂತೆ ಅಕ್ಷರ ಮತ್ತು ಸಂಸ್ಕಾರ ಕಲಿಯೋಣ. ಶಿಷ್ಠರನ್ನು ರಕ್ಷಿಸುವ ದುಷ್ಠರನ್ನು ಶಿಕ್ಷಿಸುವ ಕೆಲಸ ಮಾಡಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ‌ ಕಮಕನೂರ ಮಾತನಾಡಿ, ವಾಲ್ಮೀಕಿ ಸಮುದಾಯ ಮಾತೃ ಹದಯವಿದ್ದಂತೆ.‌ ಎಲ್ಲರನ್ನು ತೆಗೆದುಕೊಂಡು ಹೋಗುವ ನಾಯಕತ್ವದ ಗುಣ ಅವರಲ್ಲಿದೆ. ವಿಶ್ವಕ್ಕೆ ಮಾದರಿ ಮಹಾಕಾವ್ಯ "ರಾಮಾಯಣ" ನೀಡಿದ ವಾಲ್ಮೀಕಿ ಸಮ‌-ಸಮಾಜದ‌ ನಿರ್ಮಾತವಾಗಿದ್ದಾರೆ. ಹಿಂದುಳಿದ ಈ ಸಮುದಾಯ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.

ರಾಮಾಯಣ ಮತ್ತು ವಾಲ್ಮೀಕಿ‌ ಸಮಗ್ರ ಸಂಶೋಧನೆಯಾಗಲಿ :

ವಿಶೇಷ‌ ಉಪನ್ಯಾಸಕರಾಗಿ ಆಗಮಿಸಿದ ಸುರಪುರ ತಾಲೂಕಿನ ಪ್ರಭು ಮಹಾವಿದ್ಯಾಲಯದ ಉಪನ್ಯಾಸಕ ಡಾ.ಉಪೇಂದ್ರ‌ ನಾಯಕ್ ಮಾತನಾಡಿ, ರಾಮಾಯಣ ಮತ್ತು ವಾಲ್ಮೀಕಿ ಕುರಿತು ಪ್ರಗತಿಪರರು, ಬುದ್ದಿಜೀವಿಗಳೆಂದು ಕರೆಸಿಕೊಂಡವರು ಅನೇಕ ಸುಳ್ಳು, ಕಪೋಲ ಕಲ್ಪಿತ ವಿಚಾರಗಳನ್ನು ಬಿತ್ತಿದ್ದಾರೆ. ವಾಲ್ಮಿಕಿಯನ್ನು ದರೋಡೆಕೋರನೆಂದು ಬಿಂಬಿಸಿದ್ದಾರೆ. ಹೀಗಾಗಿ ನೈಜ ಸತ್ಯ ಹೊರಹಾಕಲು ಸರ್ಕಾರ ಸಂಶೋಧನೆ ಮಾಡಬೇಕಿದೆ ಎಂದರು.

ಮಹಾಪೌರರಿಂದ ಮೆರವಣಿಗೆಗೆ ಚಾಲನೆ :

ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಸರ್ದಾರ ವಲ್ಲಭಭಾಯ್ ಪಟೇಲ್ ವೃತ್ತದಿಂದ ರಂಗಮಂದಿರ ವರೆಗೆ ನಡೆದ ವಾಲ್ಮೀಕಿ ಭಾವಚಿತ್ರದ ಭವ್ಯ ಮೆರವಣಿಗೆಗೆ ಮಹಾನಗರ ಪಾಲಿಕೆಯ ಪ್ರಥಮ ಪ್ರಜೆಯಾಗಿರುವ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ಡಿ.ಸಿ. ಬಿ.ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ. ಶರಣಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಮೊದಲಾದವರು ಇದ್ದರು.

ಕಾರ್ಯಕ್ರಮದಲ್ಲಿ‌ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ನಂದಕುಮಾರ ಮಾಲಿಪಾಟೀಲ, ಗೌರವಾಧ್ಯಕ್ಷ ಗುರುರಾಜ ಎಚ್. ಸುಬೇದಾರ, ಸಮಾಜ‌ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಆಹಾರ ಇಲಾಖೆಯ ಉಪನಿರ್ದೇಶಕ ಭೀಮರಾಯ, ರೇಷ್ಮೆ‌ ಇಲಾಖೆಯ ಪ್ರಕಾಶ, ಪ್ರಾಂಶುಪಾಲರಾದ ಶಿವರಾಮ‌ ಚವ್ಹಾಣ, ಅಮರನಾಥ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಮಾಜ ಬಾಂಧವರು,‌ ಮುಖಂಡರು ಭಾಗವಹಿಸಿದ್ದರು.

ಡಾ.ರಾಜಶೇಖರ್‌ ಎಸ್.ಮಾಂಗ್ ನಿರೂಪಿಸಿದರು, ವಿದ್ಯಾಧರ‌ ಕಾಂಬಳೆ‌ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X