ಕಲಬುರಗಿ | ಮೊಸಳೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಕಲಬುರಗಿ: ಹಳ್ಳದಲ್ಲಿ ಬಂದ ಮೊಸಳೆಯನ್ನು ಸೆರೆ ಹಿಡಿದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿರುವ ಘಟನೆ ರವಿವಾರ ಸಂಜೆ ಜೇವರ್ಗಿ ತಾಲೂಕಿನ ಮಲ್ಲಾ(ಬಿ) ಗ್ರಾಮದಲ್ಲಿ ನಡೆದಿದೆ.
ಮಲ್ಲಾ(ಬಿ) ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷವಾದ ಮೊಸಳೆಯನ್ನು ಭೀಮಪ್ಪ ಪೂಜಾರಿ, ಯಲ್ಲಪ್ಪ ಅಂಕಲಗಿ, ಬಾಲಚಂದ್ರ, ಯಲ್ಲಪ್ಪ ಸೇರಿದಂತೆ ಇತರರು ಕೂಡಿಕೊಂಡು ರಕ್ಷಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳಿಗೆ ಮೊಸಳೆಯನ್ನು ಹಸ್ತಾಂತರ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಜೇವರ್ಗಿ ತಹಸೀಲ್ದಾರ್ ಮಲ್ಲಣ್ಣ ಯಲಗೋಡ, ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟಿದ್ದರಿಂದ ಮೊಸಳೆಗಳು ಹರಿದು ಬಂದಿವೆ, ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದ್ದಾರೆ.
Next Story





