ಕಲಬುರಗಿ | ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ವಿಠ್ಠಲ್ ಯಾದವ್ ಆಯ್ಕೆ

ಕಲಬುರಗಿ : ನಗರದ ಜಗತ್ ವೃತ್ತದಲ್ಲಿರುವ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಸುರುಪುರದ ವಿಠ್ಠಲ್ ವೆಂಕಣ್ಣ ಯಾದವ್ ಹಾಗೂ ಉಪಾಧ್ಯಕ್ಷರಾಗಿ ಸೇಡಂ ತಾಲೂಕಿನ ಶಂಕರ ಭೂಪಾಲ ಚಂದ್ರಶೇಖರ ಅವರು ಆಯ್ಕೆಯಾಗಿದ್ದಾರೆ.
ಶುಕ್ರವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾಗಿ ಅಧ್ಯಕ್ಷ ಸ್ಥಾನಕ್ಕೆ ವಿಠ್ಠಲ್ ಯಾದವ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶಂಕರ ಭೂಪಾಲ ಚಂದ್ರಶೇಖರ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅವರಿಗೆ ಪ್ರತಿಸ್ಪರ್ಧಿಯಾಗಿ ಯಾರೂ ಸಹ ನಾಮಪತ್ರ ಸಲ್ಲಿಸದೇ ಇರುವುದರಿಂದ ಇಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಿ, ಚುನಾವಣಾಧಿಕಾರಿಯಾಗಿರುವ ಪ್ರಕಾಶ್ ಕುದರಿ ಅವರು ಘೋಷಣೆ ಮಾಡಿದರು.
ಈ ಮೂಲಕ ಡಿಸಿಸಿ ಬ್ಯಾಂಕ್ ನ ಆಡಳಿತ ಮತ್ತೆ ಕಾಂಗ್ರೆಸ್ ಪಾಲಾಗಿದೆ.
Next Story





