Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಡ್ಡಾಯ ಪಿಎಫ್...

Kalaburagi | ಕಡ್ಡಾಯ ಪಿಎಫ್ ವ್ಯಾಪ್ತಿಗೆ ಬರುವ ಕಾರ್ಮಿಕರ ವೇತನ‌ ಮಿತಿ 25,000 ರೂ. ಗೆ ಹೆಚ್ಚಳ: ಎಂ.ಸುಬ್ರಹ್ಮಣ್ಯಂ

ವಾರ್ತಾಭಾರತಿವಾರ್ತಾಭಾರತಿ22 Sept 2026 5:50 PM IST
share
Kalaburagi | ಕಡ್ಡಾಯ ಪಿಎಫ್ ವ್ಯಾಪ್ತಿಗೆ ಬರುವ ಕಾರ್ಮಿಕರ ವೇತನ‌ ಮಿತಿ 25,000 ರೂ. ಗೆ ಹೆಚ್ಚಳ: ಎಂ.ಸುಬ್ರಹ್ಮಣ್ಯಂ

ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ತಿಂಗಳಿಗೆ 15,000 ರೂ. ರಿಂದ 25,000 ರೂ. ಗೆ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ. ಈ ತೀರ್ಮಾನದಿಂದ ದೇಶಾದ್ಯಂತ 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕಡ್ಡಾಯ ಸಾಮಾಜಿಕ ಭದ್ರತಾ ವ್ಯಾಪ್ತಿಗೆ ಬರಲಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪ್ರಾದೇಶಿಕ ಪಿಎಫ್ ಆಯುಕ್ತ ಎಂ. ಸುಬ್ರಹ್ಮಣ್ಯಂ ತಿಳಿಸಿದ್ದಾರೆ.

ಪ್ರಸ್ತುತ ಜಾರಿಯಲ್ಲಿದ್ದ ನಿಯಮದ ಪ್ರಕಾರ ತಿಂಗಳಿಗೆ 15,000 ರೂ. ಕ್ಕಿಂತ ಹೆಚ್ಚಿನ ವೇತನದೊಂದಿಗೆ ಸೇವೆಗೆ ಸೇರುವ ಹೊಸ ಉದ್ಯೋಗಿಗಳು ಸ್ವಯಂಚಾಲಿತವಾಗಿ EPF ಕಡ್ಡಾಯ ವ್ಯಾಪ್ತಿಯಿಂದ ಹೊರಗುಳಿಯುತ್ತಿದ್ದರು. ಇದರಿಂದ ಅವರಿಗೆ ಭವಿಷ್ಯ ನಿಧಿ, ಪಿಂಚಣಿ ಹಾಗೂ ವಿಮಾ ರಕ್ಷಣೆಯಂತಹ ಸೌಲಭ್ಯಗಳು ದೊರೆಯುತ್ತಿರಲಿಲ್ಲ.

ಈ ಸಮಸ್ಯೆಯನ್ನು ಮನಗಂಡು ಕೇಂದ್ರ ಸರ್ಕಾರ ವೇತನ ಮಿತಿಯನ್ನು 25,000 ರೂ. ಗೆ ಹೆಚ್ಚಿಸಿದ್ದು, ಪರಿಷ್ಕೃತ ನಿಯಮವು ಸೆಪ್ಟೆಂಬರ್ 17ರಿಂದ ಜಾರಿಗೆ ಬಂದಿದೆ ಎಂದು ಅವರು ತಿಳಿಸಿದರು.

ಹೊಸ ನಿಯಮದಂತೆ 15,000 ರೂ. ರಿಂದ 25,000 ರೂ. ವೇತನ ಶ್ರೇಣಿಯಲ್ಲಿರುವ ಉದ್ಯೋಗಿಗಳು ಈಗ EPFO ಅಡಿಯಲ್ಲಿ ಶಾಸನಬದ್ಧ ಸಾಮಾಜಿಕ ಭದ್ರತಾ ವ್ಯಾಪ್ತಿಗೆ ಒಳಪಡಲಿದ್ದಾರೆ. ಅವರಿಗೆ ನೌಕರರ ಭವಿಷ್ಯ ನಿಧಿ (EPF), ನೌಕರರ ಪಿಂಚಣಿ ಯೋಜನೆ (EPS) ಹಾಗೂ ನೌಕರರ ಠೇವಣಿ ಆಧಾರಿತ ವಿಮಾ ಯೋಜನೆ (EDLI) ಸೌಲಭ್ಯಗಳು ದೊರೆಯಲಿವೆ.

EPFO ವೇತನ ಮಿತಿಯನ್ನು ಕೊನೆಯದಾಗಿ ಸೆಪ್ಟೆಂಬರ್ 2014ರಲ್ಲಿ 15,000 ರೂ. ಗೆ ಪರಿಷ್ಕರಿಸಲಾಗಿತ್ತು. ಹನ್ನೆರಡು ವರ್ಷಗಳ ಬಳಿಕ ಉದ್ಯೋಗ ಮತ್ತು ವೇತನದಲ್ಲಿ ಆಗಿರುವ ಬದಲಾವಣೆಗಳನ್ನು ಪರಿಗಣಿಸಿ ಇದೀಗ ಮತ್ತೊಮ್ಮೆ ಪರಿಷ್ಕರಣೆ ಮಾಡಲಾಗಿದೆ ಎಂದು ಎಂ. ಸುಬ್ರಹ್ಮಣ್ಯಂ ವಿವರಿಸಿದರು.

ಈ ನಿರ್ಧಾರದಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕವಾಗಿ ಸುಮಾರು 11,339 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಐದು ವರ್ಷಗಳಲ್ಲಿ ಒಟ್ಟು ವೆಚ್ಚ 56,696 ಕೋಟಿ ರೂ. ತಲುಪುವ ಸಾಧ್ಯತೆ ಇದೆ.

ಪ್ರಸ್ತುತ EPFO ದೇಶದಾದ್ಯಂತ 7.68 ಲಕ್ಷ ಸಂಸ್ಥೆಗಳ ಸುಮಾರು 7.98 ಕೋಟಿ ಸದಸ್ಯರಿಗೆ ಸೇವೆ ನೀಡುತ್ತಿದ್ದು, EPS ಯೋಜನೆಯಡಿ ಸುಮಾರು 82 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯುತ್ತಿದ್ದಾರೆ.

ಕಲಬುರಗಿಯ ಪ್ರಾದೇಶಿಕ EPFO ಕಚೇರಿ ವ್ಯಾಪ್ತಿಯಲ್ಲಿ ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗಳು ಹಾಗೂ ಯಾದಗಿರಿ ಜಿಲ್ಲೆಯ ಶೋರಾಪುರ ಮತ್ತು ಶಹಾಪುರ ತಾಲೂಕುಗಳು ಸೇರಿವೆ. ವೇತನ ಮಿತಿ ಹೆಚ್ಚಳದಿಂದ ಈ ಭಾಗದ ಹೆಚ್ಚಿನ ಸಂಖ್ಯೆಯ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ದೊರೆಯಲಿದ್ದು, ಉದ್ಯೋಗಿಗಳ ದೀರ್ಘಕಾಲೀನ ನಿವೃತ್ತಿ ಭದ್ರತೆಗೂ ಇದು ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X