Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ನೀರಿನ ಪಂಪ್‌ಸೆಟ್‌ ಕಳ್ಳರ...

ಕಲಬುರಗಿ: ನೀರಿನ ಪಂಪ್‌ಸೆಟ್‌ ಕಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ವಶ

ವಾರ್ತಾಭಾರತಿವಾರ್ತಾಭಾರತಿ4 Aug 2026 2:10 PM IST
share
ಕಲಬುರಗಿ: ನೀರಿನ ಪಂಪ್‌ಸೆಟ್‌ ಕಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ವಶ

ಯಡ್ರಾಮಿ: ಯಡ್ರಾಮಿ ಹಾಗೂ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನೀರಿನ ಪಂಪ್‌ಸೆಟ್‌, ಮೋಟಾರ್ ಸ್ಟಾರ್ಟರ್ ಹಾಗೂ ಕೇಬಲ್ ವೈರ್ ಕಳ್ಳತನ ಪ್ರಕರಣಗಳನ್ನು ಯಡ್ರಾಮಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಕಳುವಾದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಶಹಾಪುರ ತಾಲೂಕಿನ ಗೋಗಿ ತಾಂಡಾದ ನಿವಾಸಿ ಕಿಶನ್ ಜಾಧವ (26) ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ 16 ವರ್ಷದ ಬಾಲಾಪರಾಧಿಯನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹರವಾಳ, ಕಾಚಾಪೂರ, ನಾಗರಹಳ್ಳಿ, ತೆಲಗಬಾಳ ಹಾಗೂ ಹೊನ್ನಳ್ಳಿ ಕ್ರಾಸ್ ಸಮೀಪದ ಜಮೀನುಗಳಲ್ಲಿ ರೈತರು ಅಳವಡಿಸಿದ್ದ ನೀರಿನ ಪಂಪ್‌ಸೆಟ್‌, ಮೋಟಾರ್ ಸ್ಟಾರ್ಟರ್ ಹಾಗೂ ಕೇಬಲ್ ವೈರ್‌ಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 64/2026 ಹಾಗೂ 90/2026 ಮತ್ತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 07/2026 ಪ್ರಕರಣಗಳು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2)ರಡಿ ದಾಖಲಾಗಿದ್ದವು.

ಪ್ರಕರಣಗಳ ತನಿಖೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಅದ್ದೂರು ಶ್ರೀನಿವಾಸಲು (ಐಪಿಎಸ್) ಅವರ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ್, ಗ್ರಾಮೀಣ ಉಪವಿಭಾಗದ ಡಿವೈಎಸ್‌ಪಿ ಲೋಕೇಶ್ವರಪ್ಪ ಹಾಗೂ ಜೇವರ್ಗಿ ವೃತ್ತದ ಸಿಪಿಐ ಬಾಪುಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ಯಡ್ರಾಮಿ ಪಿಎಸ್‌ಐ ಶ್ರೀಶೈಲ ಅಂಬಾಟಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿಗಳಿಂದ ಒಟ್ಟು 5 ನೀರಿನ ಪಂಪ್‌ಸೆಟ್‌ಗಳು, 3 ಮೋಟಾರ್ ಸ್ಟಾರ್ಟರ್‌ಗಳು ಹಾಗೂ ಕೇಬಲ್ ವೈರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿ ಕಿಶನ್ ಜಾಧವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಾಲಾಪರಾಧಿಯ ವಿರುದ್ಧ ಬಾಲನ್ಯಾಯ ಮಂಡಳಿಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಯಡ್ರಾಮಿ ಪಿಎಸ್‌ಐ ಶ್ರೀಶೈಲ ಅಂಬಾಟಿ ಹಾಗೂ ತನಿಖಾ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

Tags

KalaburagiWater pump settheft cases
share
ವಾರ್ತಾಭಾರತಿ
ವಾರ್ತಾಭಾರತಿ
Next Story
X