Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಹೆಲ್ಮೆಟ್ ಧರಿಸಿ – ಜೀವ...

ಕಲಬುರಗಿ | ಹೆಲ್ಮೆಟ್ ಧರಿಸಿ – ಜೀವ ಉಳಿಸಿ: ಜನಜಾಗೃತಿ ಬೈಕ್ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ25 July 2026 7:54 PM IST
share
ಕಲಬುರಗಿ | ಹೆಲ್ಮೆಟ್ ಧರಿಸಿ – ಜೀವ ಉಳಿಸಿ: ಜನಜಾಗೃತಿ ಬೈಕ್ ರ‍್ಯಾಲಿ

ಕಲಬುರಗಿ: ರಸ್ತೆ ಅಪಘಾತಗಳ ತಡೆ ಹಾಗೂ ಯುವಜನರಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮತ್ತು ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಶನಿವಾರ "ಹೆಲ್ಮೆಟ್ ಧರಿಸಿ – ಜೀವ ಉಳಿಸಿ" ಹಾಗೂ "ಡ್ರಗ್ಸ್‌ಗೆ ನಕಾರ ನೀಡಿ. ಆರೋಗ್ಯಕರ ಸಮಾಜ ನಿರ್ಮಿಸಿ" ಎಂಬ ಘೋಷಣೆಯಡಿ ಬೃಹತ್ ಜನಜಾಗೃತಿ ಬೈಕ್ ರ‍್ಯಾಲಿ ಯಶಸ್ವಿಯಾಗಿ ನಡೆಯಿತು.

ನಗರದ ನಾಗರೇಶ್ವರ ಶಾಲೆಯಿಂದ ಆರಂಭವಾದ ಬೈಕ್ ರ‍್ಯಾಲಿಯು ಸೂಪರ್ ಮಾರ್ಕೆಟ್, ಜಗತ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಮಾಪ್ತಿಯಾಯಿತು.

ರ‍್ಯಾಲಿಯಲ್ಲಿ ಭಾಗವಹಿಸಿದ ಕಾರ್ಯಕರ್ತರು ಮತ್ತು ಯುವಕರು ಹೆಲ್ಮೆಟ್ ಧಾರಣೆಯ ಮಹತ್ವ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಹಾಗೂ ಡ್ರಗ್ಸ್ ಮತ್ತು ಮಾದಕ ವ್ಯಸನದಿಂದ ದೂರವಿರುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ರ‍್ಯಾಲಿಗೆ ಸಾರ್ವಜನಿಕರು ಹಾಗೂ ವಾಹನ ಸವಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಕಾರ್ಯಕ್ರಮಕ್ಕೆ ಅಗತ್ಯ ಅನುಮತಿ ನೀಡಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿ, ಭದ್ರತೆ ಒದಗಿಸಿದ ಕಲಬುರಗಿ ನಗರ ಪೊಲೀಸ್ ಇಲಾಖೆ, ಸಂಚಾರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಜನಪರ ವೇದಿಕೆ ಕಲಬುರಗಿ ಜಿಲ್ಲಾಧ್ಯಕ್ಷ ಅರುಣಕುಮಾರ್ ಎಂ. ನಾಮದಾರ್, ರಸ್ತೆ ಸುರಕ್ಷತೆ ಮತ್ತು ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣವು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಯುವಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಹ ಸಾಮಾಜಿಕ ಅಭಿಯಾನಗಳನ್ನು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ರ‍್ಯಾಲಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸದಾಶಿವ ಕ್ಷತ್ರಿಯ, ಅಫಜಲಪುರ ತಾಲೂಕು ಅಧ್ಯಕ್ಷ ಮುತ್ತು ಕುರಿಮನಿ, ಯಡ್ರಾಮಿ ಮುಖಂಡ ಜಗದೀಶ್ ಮಡಿವಾಳ, ಜೇವರ್ಗಿ ಅಧ್ಯಕ್ಷ ಸತೀಶ್ ಜೆ, ಜಿಲ್ಲಾ, ತಾಲೂಕು ಹಾಗೂ ನಗರ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು, ಯುವಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.


Tags

KalaburagiHelmetBike Rally
share
ವಾರ್ತಾಭಾರತಿ
ವಾರ್ತಾಭಾರತಿ
Next Story
X