Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬೆಳೆ ವಿಮೆ ಕಂಪನಿಗಳಿಂದ...

Kalaburagi | ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಅನ್ಯಾಯ ಸಹಿಸುವುದಿಲ್ಲ : ಶಾಸಕ ಅಲ್ಲಮಪ್ರಭು ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ12 Aug 2026 5:38 PM IST
share
Kalaburagi | ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಅನ್ಯಾಯ ಸಹಿಸುವುದಿಲ್ಲ : ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ಬರದ ಸಂಕಷ್ಟಕ್ಕೆ ಸಿಲುಕಿರುವ ಕಲಬುರಗಿ ದಕ್ಷಿಣ ಕ್ಷೇತ್ರದ ರೈತರೊಂದಿಗೆ ಬೆಳೆ ವಿಮೆ ಕಂಪನಿಗಳು ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಎಚ್ಚರಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಕೆಡಿಪಿ ಸಭೆಯಲ್ಲಿ ಸುಮಾರು ಐದು ಗಂಟೆಗಳ ಕಾಲ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಮುಂಗಾರು ಹಂಗಾಮಿನಲ್ಲಿ ಹೆಸರು, ಉದ್ದು, ಎಳ್ಳು, ಸೋಯಾ ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಕ್ಷೇತ್ರದ ಸುಮಾರು 4 ಸಾವಿರ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, ಅವರಿಗೆ ಮಧ್ಯಂತರ ಪರಿಹಾರ ನೀಡುವ ಬದಲು ‘ಬೆಳೆ ಅಲ್ಪಸ್ವಲ್ಪ ಬಂದಿದೆ’ ಎಂದು ಬರೆದುಕೊಡುವಂತೆ ವಿಮಾ ಕಂಪನಿಗಳ ಪ್ರತಿನಿಧಿಗಳು ಒತ್ತಡ ಹೇರುತ್ತಿದ್ದಾರೆ ಎಂಬ ದೂರುಗಳು ಬಂದಿವೆ ಎಂದು ಹೇಳಿದರು.

ವಿಮಾ ಕಂತು ಪಾವತಿಸಿ ನೋಂದಣಿಯಾಗಿರುವ ಅರ್ಹ ರೈತರಿಗೆ ಕೂಡಲೇ ಮಧ್ಯಂತರ ಪರಿಹಾರ ನೀಡಬೇಕು. ಬಳಿಕ ಕ್ರಾಪ್‌ ಕಟಿಂಗ್ ಪ್ರಯೋಗದ ಆಧಾರದ ಮೇಲೆ ಅಂತಿಮ ಪರಿಹಾರ ಮೊತ್ತವನ್ನು ಲೆಕ್ಕಹಾಕಿ ಪಾವತಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಿಂದಲೇ ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ರೈತರಿಗೆ ಮಧ್ಯಂತರ ಪರಿಹಾರ ದೊರೆಯುವಂತೆ ತಕ್ಷಣ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ರೈತರ ಸಂಕಷ್ಟದ ಸಂದರ್ಭದಲ್ಲಿ ವಿಮಾ ಕಂಪನಿಗಳು ನಿಯಮಗಳ ಹೆಸರಿನಲ್ಲಿ ರೈತರನ್ನು ಸತಾಯಿಸುವುದು ಅಥವಾ ಒತ್ತಡ ಹೇರುವುದು ಕಂಡುಬಂದರೆ ಸಹಿಸುವುದಿಲ್ಲ. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

28 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಮುಂಜಾಗ್ರತಾ ಕ್ರಮ :

ಮುಂದಿನ ಆರು ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ದಕ್ಷಿಣ ಕ್ಷೇತ್ರದ 28 ಗ್ರಾಮಗಳಲ್ಲಿ ಅಗತ್ಯವಿರುವ ಕಡೆ ಕೊಳವೆಬಾವಿ ಕೊರೆದು ಜನರು ಹಾಗೂ ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮುಂಬರುವ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಗತ್ಯವಿರುವ ಕಡೆ ಸ್ಥಳೀಯ ಪರಿಸ್ಥಿತಿ ಗಮನಿಸಿ ಗೋಶಾಲೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಸಾಕಷ್ಟು ಪ್ರಮಾಣದಲ್ಲಿ ಮೇವಿನ ದಾಸ್ತಾನು ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಭೆಗೆ ಗೈರಾದ ಕೆಲ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಮಾನಪ್ಪ ಕಟ್ಟೀಮನಿ, ಗ್ರೇಡ್-2 ತಹಶೀಲ್ದಾರ್, ಕೃಷಿ, ಪಶುಸಂಗೋಪನೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Allamaprabhu PatilKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X