Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಇಚ್ಛಾಶಕ್ತಿಯಿದ್ದರೆ...

Kalaburagi | ಇಚ್ಛಾಶಕ್ತಿಯಿದ್ದರೆ ವಿಕಲಚೇತನರು ಏನನ್ನಾದರೂ ಸಾಧಿಸಬಹುದು: ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ವಿಶ್ವ ವಿಕಲಚೇತನರ ದಿನಾಚರಣೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ17 Nov 2026 9:59 PM IST
share
Kalaburagi | ಇಚ್ಛಾಶಕ್ತಿಯಿದ್ದರೆ ವಿಕಲಚೇತನರು ಏನನ್ನಾದರೂ ಸಾಧಿಸಬಹುದು: ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಕಲಬುರಗಿ : ದೇವರು ದೇಹಕ್ಕೆ ಮಾತ್ರ ಸಣ್ಣ ಕಷ್ಟ ನೀಡಿದ್ದಾನೆಯೇ ಹೊರತು ಮನಸ್ಸಿಗೆ ನೀಡಿಲ್ಲ. ಮನಸ್ಸು ಮಾಡಿದರೆ ವಿಕಲಚೇತನರು ಯಾರಿಗೂ ಕಡಿಮೆಯಿಲ್ಲ. ಇಚ್ಛಾಶಕ್ತಿಯಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.

ಮಂಗಳವಾರ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ 2026ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಘ-ಸಂಸ್ಥೆಗಳು ಮತ್ತು ಎಂ.ಆರ್.ಡಬ್ಲ್ಯು., ಯು.ಆರ್.ಡಬ್ಲ್ಯು., ವಿ.ಆರ್.ಡಬ್ಲ್ಯು. ಸಿಬ್ಬಂದಿಯ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದೈನಂದಿನ ಕೆಲಸದ ಒತ್ತಡಗಳ ನಡುವೆಯೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ತಮಗೆ ಅತೀವ ಸಂತಸ ತಂದಿದೆ. ಅಲ್ಲದೆ, ಇದು ಜೀವನದ ಮೇಲಿನ ಉತ್ಸಾಹವನ್ನು ಹೆಚ್ಚಿಸಿದೆ ಎಂದು ರಾಯಪ್ಪ ಹುಣಸಗಿ ಹೇಳಿದರು.

ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತಲೂ ಉತ್ಸಾಹದಿಂದ ಭಾಗವಹಿಸುವುದೇ ನಿಜವಾದ ಗೆಲುವು. ಎಲ್ಲರೂ ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಸ್ಪರ್ಧಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಇಲಾಖೆಯಿಂದ ಪ್ರಥಮ ಚಿಕಿತ್ಸಾ ಕಿಟ್, ಎನರ್ಜಿ ಡ್ರಿಂಕ್ಸ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿ, 2026ನೇ ಸಾಲಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಕಲಬುರಗಿ ಜಿಲ್ಲೆಯಲ್ಲಿ ವಿಕಲಚೇತನ ಕ್ರೀಡಾಪಟುಗಳಿಗಾಗಿ ಈ ರೀತಿಯ ಕ್ರೀಡಾಕೂಟ ಆಯೋಜಿಸಿ ಚಾಲನೆ ನೀಡುತ್ತಿರುವುದು ವಿಶೇಷವಾಗಿದೆ. ಜಿಲ್ಲಾಡಳಿತದ ಸಂಪೂರ್ಣ ಸಹಕಾರದೊಂದಿಗೆ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ್ ಗೋನಾಯಕ್, ವಿಜಯಲಕ್ಷ್ಮಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಲಿಂಗರಾಜ್ ತಾರ್ಫೆಲ್, ವಿನಾಯಕ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಶ್ರೀಮಂತ ರೇವೂರ್, ಫ್ಯಾಷನ್ ಎನ್‌ಜಿಒ ಅಧ್ಯಕ್ಷ ಜಾಕೀರ್ ಹುಸೇನ್, ಸಿದ್ಧಾರ್ಥ್ ಕೋರ್ವಾರ, ರಾಜು ಶಕಾಪುರ, ಡಾ. ಲೋಕೇಶ್ ಹಾಗೂ ವೆಂಕಟೇಶ್ ಪಾಟೀಲ್ ಉಪಸ್ಥಿತರಿದ್ದರು.

Tags

Rayappa HunasagiKalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X