ಕಲಬುರಗಿ | ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಮಹಿಳೆ ಮೃತ್ಯು

ಸಾಂದರ್ಭಿಕ ಚಿತ್ರ
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ದರ್ಶನಕ್ಕೆಂದು ಬಂದಿದ್ದ ಮಹಿಳೆಯೋರ್ವಳು ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ಮೂಲದ ಕಲಾವತಿ (50) ಎಂಬ ಮಹಿಳೆ ಮೃತಪಟ್ಟಿರುವುದು ತಿಳಿದುಬಂದಿದೆ.
ಗುರುವಾರ ಗುರುಪೂರ್ಣಿಮೆ ಹಿನ್ನಲೆ ದತ್ತನ ದರ್ಶನಕ್ಕೆ ಮಹಿಳೆ ಆಗಮಿಸಿದ್ದರು. ಒಂದು ಗಂಟೆಗೂ ಹೆಚ್ಚು ದತ್ತನ ದರ್ಶನ ಸಂಧರ್ಭದಲ್ಲಿ ನಿಂತಾಗ ದಿಢೀರ್ ನೇ ನೆಲಕ್ಕೆ ಕುಸಿದು ಬಿದ್ದಾಗ ಕಾಲ್ತುಳಿದಿಂದ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಕರ್ನಾಟಕ , ಆಂಧ್ರಪ್ರದೇಶ , ತೆಲಂಗಾಣ , ಮಹಾರಾಷ್ಟ್ರದಿಂದ ಸಾವಿರಾರು ಭಕ್ತರು ಆಗಮಿಸಿರುವ ಹಿನ್ನೆಲೆಯಲ್ಲಿ ನೂಕು ನುಗ್ಗಲು ಆಗಿದೆ ಎಂದು ತಿಳಿದುಬಂದಿದೆ.
ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





