ಕಲಬುರಗಿ| ಸಿಡಿಲು ಬಡಿದು ಮಹಿಳೆ ಸ್ಥಿತಿ ಗಂಭೀರ: ಆರು ಕುರಿಗಳು ಸಾವು

ಕಲಬುರಗಿ: ಸಿಡಿಲು ಬಡಿದ ಪರಿಣಾಮ 6 ಕುರಿಗಳು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಗ್ರಾಮದ ರಶೀದಾ ಬೇಗಂ (48) ಅವರು ಕುರಿ ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಕಾಳಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲು ಸೂಚಿಸಿರುವುದಾಗಿ ತಿಳಿದುಬಂದಿದೆ.
ಸಿಡಿಲು ಬಡಿದ ಪರಿಣಾಮ ಮಹಿಳೆಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದೇ ವೇಳೆ ಗ್ರಾಮದ ರವಿ ಪೂಜಾರಿ ಅವರಿಗೆ ಸೇರಿದ ಆರು ಕುರಿಗಳು ಸಿಡಿಲು ಬಡಿದು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರೂ ಸಮಯಕ್ಕೆ ವಾಹನ ಸ್ಥಳಕ್ಕೆ ಬಂದಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
Next Story




