ಕಲಬುರಗಿ | ಕೂಲಿ ಕಾರ್ಮಿಕರೊಂದಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಾದ

ಕಲಬುರಗಿ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಶನಿವಾರ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹೊನ್ನಕಿರಣಗಿ ಗ್ರಾಮದ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರು ರಾಜ್ಯದ 26 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಆದರೆ ಕಲಬುರಗಿ ಜಿಲ್ಲೆಯ ಕಲಬುರಗಿ ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮ ಪಂಚಾಯತಿಯ ನರೇಗಾ ಕೂಲಿ ಕಾರ್ಮಿಕರಲ್ಲಿ ವಿಶೇಷತೆಯನ್ನು ಕಂಡು ಬಂದಿದೆ ಎಂದು ತಿಳಿಸಿದರು.
ಕೂಲಿ ಕಾರ್ಮಿಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಿದರು. ಇಬ್ಬರು ಮಹಿಳಾ ಕೂಲಿ ಕಾರ್ಮಿಕರು ನರೇಗಾ ಯೋಜನೆಯಡಿ ಬಂದಂತಹ ಕೂಲಿ ಮೊತ್ತ 1 ಲಕ್ಷ ರೂ.ಗಳನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿರುತ್ತಾರೆ. ಇದರ ಜೊತೆಗೆ ಎಲ್ಲಾ ಕೂಲಿ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಇದೇ ರೀತಿ ನರೇಗಾ ಯೋಜನೆಯಡಿ ಕೂಲಿ ಕೆಲಸವನ್ನು ಮಾಡಲು ತಿಳಿಸಿದರು.
ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ಮಾತನಾಡಿದರು. ಸಂವಾದ ಕಾರ್ಯಕ್ರಮದಲ್ಲಿ 425 ಕೂಲಿ ಕಾರ್ಮಿಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕಲಬುರಗಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ ಸೈಯದ್ ಪಟೇಲ್, ಕಲಬುರಗಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ರೇವಣಸಿದ್ದಪ್ಪ ಗೌಡರ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕವಿತಾ ಕಾಗೆ, ಗ್ರಾಮ ಪಂಚಾಯತ್ ಅಧ್ಯಕ್ಷರು, ತಾಂತ್ರಿಕ ಸಂಯೋಜಕರಾದ ಸತೀಶ್, ತಾಂತ್ರಿಕ ಸಹಾಯಕರಾದ ಜಗದೀಶ್ ಮೇಗಪ್ಪಿ, ಐಈಸಿ ಸಂಯೋಜಕರಾದ ಮೋಸಿನ ಖಾನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಕ್ಷೇತ್ರ ಸಹಾಯಕರಾದ ಸದಾಶಿವ ಹೈದರಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.







