Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೆಬಿಎನ್ ಆಸ್ಪತ್ರೆಯಲ್ಲಿ...

Kalaburagi | ಕೆಬಿಎನ್ ಆಸ್ಪತ್ರೆಯಲ್ಲಿ ಹಿಸ್ಟರೆಕ್ಟಮಿ, ಸುಧಾರಿತ ಲ್ಯಾಪರೊಸ್ಕೋಪಿ ಕುರಿತು ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ30 Oct 2026 7:25 PM IST
share
Kalaburagi | ಕೆಬಿಎನ್ ಆಸ್ಪತ್ರೆಯಲ್ಲಿ ಹಿಸ್ಟರೆಕ್ಟಮಿ, ಸುಧಾರಿತ ಲ್ಯಾಪರೊಸ್ಕೋಪಿ ಕುರಿತು ಕಾರ್ಯಾಗಾರ

ಕಲಬುರಗಿ : ಖಾಜಾ ಬಂದೇ ನವಾಝ್‌ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ಸಂಘದ (KSOGA) ಜಂಟಿ ಆಶ್ರಯದಲ್ಲಿ ‘KSOGA-2026’ ಸಮ್ಮೇಳನದ ಅಂಗವಾಗಿ, ಖಾಜಾ ಬಂದಾನವಾಜ ಬೋಧನಾ ಹಾಗೂ ಸಾಮಾನ್ಯ ಆಸ್ಪತ್ರೆಯಲ್ಲಿ (KBNTGH) ‘ಹಿಸ್ಟರೆಕ್ಟಮಿ: ವಿಭಿನ್ನ ವಿಧಾನಗಳು ಮತ್ತು ಸುಧಾರಿತ ಲ್ಯಾಪರೊಸ್ಕೋಪಿ’ ಕುರಿತ ಕಾರ್ಯಾಗಾರ ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಾಗಾರದ ಮಹತ್ವದ ಕುರಿತು ಮಾತನಾಡಿದ ಪ್ರೊ. ಸೈಯದ್ ಅಶ್ಫಾಕ್ ಅಹಮದ್, “ಈ ಕಾರ್ಯಾಗಾರವು ಅನೇಕ ಮಹಿಳೆಯರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಬಲ್ಲ ಅತ್ಯುತ್ತಮ ವೇದಿಕೆಯಾಗಿದೆ. ಭಾಗವಹಿಸಿದ ವೈದ್ಯರು ಹಾಗೂ ಪ್ರತಿನಿಧಿಗಳು ತಜ್ಞರೊಂದಿಗೆ ನೇರ ಸಂವಾದ ನಡೆಸಿ, ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ ಮತ್ತು ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ” ಎಂದರು.

ಆಸ್ಪತ್ರೆಯ ಧ್ಯೇಯೋದ್ದೇಶಗಳ ಕುರಿತು ಮಾತನಾಡಿದ ಅವರು, “ಕೆಬಿಎನ್ ಆಸ್ಪತ್ರೆಯು ಸಮಾಜದ ಬಡ ಹಾಗೂ ಅಗತ್ಯವಿರುವ ಜನರಿಗೆ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಬದ್ಧವಾಗಿದೆ. ಈ ಭಾಗದ ಅತ್ಯಂತ ಸುಸಜ್ಜಿತ ವೈದ್ಯಕೀಯ ಕೇಂದ್ರವಾಗಿ ರೂಪುಗೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಯ ಎಲ್ಲ ವಿಭಾಗಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ನಿರಂತರವಾಗಿ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೆಬಿಎನ್ ವಿಶ್ವವಿದ್ಯಾಲಯದ ಕುಲಸಚಿವ ಮೀರ ವಿಲಾಯತ್ ಅಲಿ ಅವರು ವಿಶ್ವವಿದ್ಯಾಲಯವು ಸಮಾಜಕ್ಕೆ ನೀಡುತ್ತಿರುವ ಸೇವೆಯನ್ನು ಶ್ಲಾಘಿಸಿದರು. ವೈದ್ಯಕೀಯ ಕ್ಷೇತ್ರದ ಜ್ಞಾನವನ್ನು ನವೀಕರಿಸಲು ಹಾಗೂ ಕೌಶಲಗಳನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರಗಳು ಅತ್ಯಗತ್ಯ ಎಂದು ತಿಳಿಸಿದ ಅವರು, ಸಂಘಟಕರಿಗೆ ಶುಭ ಹಾರೈಸಿದರು.

ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ಸಂಘದ ಮುಖ್ಯ ಪೋಷಕರಾದ ಡಾ. ಎಂ.ಜಿ. ಹಿರೇಮಠ ಅವರು ಸಂಘದ ಚಟುವಟಿಕೆಗಳ ಕುರಿತು ವಿವರಿಸಿ, ಕೆಬಿಎನ್ ಆಸ್ಪತ್ರೆಯ ಬೆಳವಣಿಗೆಗೆ ಸಂತಸ ವ್ಯಕ್ತಪಡಿಸಿದರು. ಅಲ್ಲದೆ, ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

10 ಸಂಕೀರ್ಣ ಶಸ್ತ್ರಚಿಕಿತ್ಸೆಗಳ ನೇರ ಪ್ರಸಾರ :

ಕಾರ್ಯಾಗಾರದ ಪ್ರಮುಖ ಆಕರ್ಷಣೆಯಾಗಿ, ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ (ಒಟಿ) ನಡೆಸಲಾದ 10 ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಸೆಮಿನಾರ್ ಹಾಲ್‌ನಲ್ಲಿ ನೇರ ಪ್ರಸಾರ ಮಾಡಲಾಯಿತು. ಈ ಸಂದರ್ಭದಲ್ಲಿ ತಜ್ಞರೊಂದಿಗೆ ವೈದ್ಯರು ನೇರ ಸಂವಾದ ನಡೆಸಿದರು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 150ಕ್ಕೂ ಹೆಚ್ಚು ವೈದ್ಯರು ಹಾಗೂ ಅಭ್ಯರ್ಥಿಗಳು ನೋಂದಾಯಿಸಿಕೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೆಎಸ್‌ಒಜಿಎ ರಾಜ್ಯಾಧ್ಯಕ್ಷೆ ಡಾ. ರಾಜಶ್ರೀ ಪಾಲದಿ ಸ್ವಾಗತಿಸಿದರು. ಡಾ. ಫರತ್ ನಿರೂಪಿಸಿದರು. ಪ್ರಸೂತಿ ವಿಭಾಗದ ಮುಖ್ಯಸ್ಥೆ ಡಾ. ಮೆಹವೀಶ್ ಅಂಜುಮ ವಂದಿಸಿದರು.

ಈ ಸಂದರ್ಭದಲ್ಲಿ ಐ.ಕ್ಯೂ.ಎ.ಸಿ ನಿರ್ದೇಶಕ ಡಾ. ಅಬ್ದುಲ್ ಬಸೀರ್, ಮೆಡಿಕಲ್ ಡೀನ್ ಡಾ. ಗುರುಪ್ರಸಾದ್, ಅಕಾಡೆಮಿಕ್ ಡೀನ್ ಡಾ. ಜಮಾ ಮೂಸ್ವಿ, ಮೆಡಿಕಲ್ ಅಧೀಕ್ಷಕ ಡಾ. ಸಿದ್ಧಲಿಂಗ ಚೆಂಗಟಿ, ಆಡಳಿತಾಧಿಕಾರಿ ಡಾ. ರಾಧಿಕಾ ಪ್ರಸಾದ್, ಡಾ. ಸುಜಾತಾ, ಡಾ. ಆಯೇಷಾ ಹುಮೇರಾ, ಡಾ. ನಿವೇದಿತಾ, ಡಾ. ಶಾಂತಾ, ಡಾ. ಫರ್ಹತ್ ಕಾಜಿಮ, ಡಾ. ಪ್ರಿಯಾಂಕಾ ಬಿರಾದಾರ, ಡಾ. ಝೋಹ್ರಾ ಅಂಜುಮ, ಡಾ. ಸೈದಾ ಆಯೇಷಾ, ಡಾ. ಶ್ರೇಯಾ ಅಂಕ, ಡಾ. ಮಿಸ್ಬಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

KBN HospitalKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X