Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿಶೇಷ ಚೇತನರ ಹಕ್ಕು,...

Kalaburagi | ವಿಶೇಷ ಚೇತನರ ಹಕ್ಕು, ಸೌಲಭ್ಯಗಳ ಕುರಿತು ಕಾರ್ಯಾಗಾರ

ವಿಶೇಷ ಚೇತನರು ಹಕ್ಕು, ಸೌಲಭ್ಯಗಳ ಅರಿವು ಪಡೆದು ಸ್ವಾವಲಂಬಿಗಳಾಗಬೇಕು : ಶಾಸಕ ಅಲ್ಲಮಪ್ರಭು ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ1 Oct 2026 7:27 PM IST
share
Kalaburagi | ವಿಶೇಷ ಚೇತನರ ಹಕ್ಕು, ಸೌಲಭ್ಯಗಳ ಕುರಿತು ಕಾರ್ಯಾಗಾರ

ಕಲಬುರಗಿ: ವಿಶೇಷ ಚೇತನರು ತಮ್ಮ ಹಕ್ಕುಗಳು ಹಾಗೂ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಅರಿವು ಹೊಂದಿ ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎಂಬ ಉದ್ದೇಶದಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಲಬುರಗಿ ಹಾಗೂ ಭಾಗ್ಯೋದಯ ವೆಲ್ಫೇರ್ ಸೊಸೈಟಿ ವತಿಯಿಂದ ವಿಶೇಷ ಚೇತನರು ಹಾಗೂ ಅವರ ಪಾಲಕರಿಗಾಗಿ ಒಂದು ದಿನದ ಅರಿವು ಕಾರ್ಯಾಗಾರವನ್ನು ನಗರದ ಜಗತ್‌ನಲ್ಲಿರುವ ಭಾಗ್ಯೋದಯ ವೆಲ್ಫೇರ್ ಸೊಸೈಟಿಯಲ್ಲಿ ಆಯೋಜಿಸಲಾಗಿತ್ತು.

ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಲು ಅಗತ್ಯವಿರುವ ಅವಕಾಶಗಳನ್ನು ಕಲ್ಪಿಸುವುದು ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳು ಅರ್ಹರಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ವಿಶೇಷ ಚೇತನರ ಹಕ್ಕುಗಳು, ಸಬಲೀಕರಣ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ತಜ್ಞರಿಂದ ಮಾಹಿತಿ ನೀಡಲಾಯಿತು. ಸರ್ಕಾರದ ಸೌಲಭ್ಯಗಳನ್ನು ಪಡೆಯುವ ವಿಧಾನ, ಕಾನೂನು ರಕ್ಷಣೆ, ಶಿಕ್ಷಣ, ಉದ್ಯೋಗ, ಪುನರ್ವಸತಿ ಹಾಗೂ ಇತರ ಅಗತ್ಯ ಸೇವೆಗಳ ಕುರಿತು ವಿಶೇಷ ಚೇತನರು ಮತ್ತು ಅವರ ಪಾಲಕರಿಗೆ ಅರಿವು ಮೂಡಿಸಲಾಯಿತು.

ವಿಶೇಷ ಚೇತನರು ತಮ್ಮ ಹಕ್ಕುಗಳ ಕುರಿತು ತಿಳಿದುಕೊಂಡು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಮೂಲಕ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಲು ಮುಂದಾಗಬೇಕು ಎಂದು ಕಾರ್ಯಾಗಾರದಲ್ಲಿ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ ನಾಗೇಂದ್ರ ಗುಳ್, ಲಾಲಾಜಿ, ಅರುಣಕುಮಾರ್, ಎಂಆರ್‌ಡಬ್ಲ್ಯು ಖಾಸಿಂ, ಕೆ. ವಾಲಿ, ಶಾಂತಕುಮಾರ್ ಗಜರೆ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ವಿಶೇಷ ಚೇತನರು ಹಾಗೂ ಅವರ ಪಾಲಕರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X