ಕಲಬುರಗಿ: ಚೈತನ್ಯ ಶಿವಲಿಂಗಕ್ಕೆ ಪೂಜೆ; ಪೊಲೀಸ್ ರಿಂದ ರೂಟ್ ಮಾರ್ಚ್

ಕಲಬುರಗಿ: ಶಿವರಾತ್ರಿ ದಿನದಂದು ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತ್ಯನ್ಯ ಶಿವಲಿಂಗಕ್ಕೆ ಹಿಂದೂ ಸಮುದಾಯದವರು ಪೂಜೆ ಸಲ್ಲಿಸಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇನ್ನೊಂದೆಡೆ ಆಳಂದ ಪಟ್ಟಣದಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಮತ್ತು ಜನ ಸಾಮಾನ್ಯರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ನೂರಾರು ಜನ ಸಿಬ್ಬಂದಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸೋಮವಾರ ಸಂಜೆ ಪಥ ಸಂಚಲನ ನಡೆಸಿದರು.
ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ಸರಾಯಿ ಮಾರಾಟ ಕೂಡಾ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Next Story





