ವಿಜಯನಗರ | ಕೊಟ್ಟೂರೇಶ್ವರ ಮಹಾ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

ವಿಜಯನಗರ: ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಹಸಿರು ಹೊನಲು ತಂಡ, ಶಿವ ಭಕ್ತಿ ಮಹಿಳಾ ಯೋಗ ತಂಡ ಹಾಗೂ ಪತಂಜಲಿ ಯೋಗ ಸಮಿತಿ ತಂಡಗಳ ಸಹಯೋಗದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗದ ಮಹತ್ವ, ಆರೋಗ್ಯಕರ ಜೀವನದಲ್ಲಿ ಯೋಗದ ಪಾತ್ರ ಹಾಗೂ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಯೋಗದ ಪರಿಣಾಮಗಳ ಕುರಿತು ವಿಶೇಷವಾಗಿ ತಿಳಿಸಲಾಯಿತು.
ಯೋಗ ತರಬೇತುದಾರರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಪ್ರದರ್ಶಿಸಿ, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿ.ಮೋಹನ ರೆಡ್ಡಿ, ಮಹಾವಿದ್ಯಾಲಯದ ಪ್ರಾಂಶುಪಾಲರಾದ, ಡಾ.ಎಮ್. ರವಿಕುಮಾರ, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.
Next Story




